ಚಿಕ್ಕಬಳ್ಳಾಪುರ, (ನ.20): ಖಾಸಗಿ ಬಸ್ ರಸ್ತೆ ಬದಿ ಕಾಲುವೆಗೆ ಉರುಳಿಬಿದ್ದ ಪರಿಣಾಮ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಬಳಿ ನಡೆದಿದೆ.
ಶನಿವಾರ ರಾತ್ರಿ ಹಿಂದೂಪುರದಿಂದ ತಿರುಪತಿಗೆ ತೆರಳುತ್ತಿದ್ದ ಭಾರತಿ ಖಾಸಗಿ ಬಸ್ ಇದಾಗಿದ್ದು, ಬಸ್ನಲ್ಲಿ 45ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು.
ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಮೋರಿಗೆ ಉರುಳಿಬಿದ್ದಿದೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಬಹುತೇಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಲವರಿಗೆ ಬೆನ್ನು ಮೂಳೆ, ಕೈ ಕಾಲು, ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ ಎನ್ನಲಾಗಿದೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

