ದೊಡ್ಡಬಳ್ಳಾಪುರ, (ನ.21): ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೇವನಹಳ್ಳಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕೆ.ಎಸ್.ಮಧುಶ್ರೀ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರಾದ ಪ್ರೊ.ಎನ್.ಶ್ರೀನಿವಾಸಯ್ಯ, ಸಾಂಸ್ಕೃತಿಕ ಸಮಿತಿ ಸಂಯೋಜಕ ಪ್ರೊ.ಎಂ.ಎನ್.ಸುರೇಶ್ ಕುಮಾರ್ ವಿದ್ಯಾರ್ಥಿನಿಯನ್ನು ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

