
ದೊಡ್ಡಬಳ್ಳಾಪುರ, (ನ.21): ಮತ ಪರಿಷ್ಕರಣೆ ನೆಪದಲ್ಲಿ ಮುಸ್ಲಿಂ ಸಮುದಾಯದ ಮತಗಳನ್ನು ಕೈಬಿಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಧೋರಣೆಯನ್ನು ಮುಂದುವರೆಸಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶ್ರೀನಗರ ಬಶೀರ್ ಆರೋಪಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿ ಭಾನುವಾರ ನಡೆದ ಸಭೆಯಲ್ಲಿ ಮಾತಾಡಿದ ಅವರು, ಮುಂಬರುವ ಚುನಾವಣೆ ದೃಷ್ಟಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮುಸ್ಲಿಂ ಸಮುದಾಯದ ಹೆಸರುಗಳನ್ನು ಡಿಲೀಟ್ ಮಾಡಲಾಗುತ್ತಿದೆ. ಇದು ಮುಸ್ಲಿಂ ಸಮುದಾಯದ ಅಳಿವು, ಉಳಿವಿನ ಪ್ರಶ್ನೆಯಾಗುತ್ತದೆ. ಮತದಾನದ ಹಕ್ಕು ಇಲ್ಲವಾದಲ್ಲಿ, ಸಮುದಾಯ ತೊಂದರೆಗೆ ಒಳಗಾಗುತ್ತದೆ ಎಂಬುದು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ.

ಬಿಜೆಪಿ ಸರ್ಕಾರ ಈ ಎಲ್ಲಾ ಶಡ್ಯಂತ್ರಗಳಿಗೆ ಮುಂಬರುವ ಚುನಾವಣೆಯಲ್ಲಿ ತಕ್ಕಪಾಠ ಅನುಭವಿಸಲಿದೆ ಎಂದರು.
ಸಭೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಚರಣ್ ಜಿತ್ ಸಿಂಗ್ ಚಂಡೋಕ್, ಪ್ರಧಾನ ಕಾರ್ಯದರ್ಶಿ ಇರ್ಶಾದ್ ಶೇಕ್, ಜಿಲ್ಲಾ ಅಧ್ಯಕ್ಷ ಮುಬಾರಕ್, ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ.ಜಗನಾಥ್, ಕಸಬಾ ಅಧ್ಯಕ್ಷ ಅಪ್ಪಿ ವೆಂಕಟೇಶ್, ಮುಖಂಡರಾದ ಇರ್ಫಾನ್ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
