ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ಜಿಲ್ಲೆಯಾದ್ಯಂತ ಮನೆ ಮನೆ ಸಮೀಕ್ಷೆ ಕಾರ್ಯ ಯಶಸ್ವಿ- ಜಿಲ್ಲಾಧಿಕಾರಿ ಆರ್.ಲತಾ

ಬೆಂ.ಗ್ರಾ.ಜಿಲ್ಲೆ (ನ.21): ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2023 ರ ಅಂಗವಾಗಿ  ನವೆಂಬರ್ 20 ಭಾನುವಾರದಂದು ಜಿಲ್ಲೆಯಾದ್ಯಂತ ಎಲ್ಲಾ 1137  ಮತಗಟ್ಟೆಗಳಲ್ಲಿ  ನಡೆದ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು ಎಂದು  ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರ ಹಕ್ಕು ಮತ್ತು ಕರ್ತವ್ಯವಾಗಿದೆ. ಅರ್ಹ ಮತದಾರರು ಈ ಹಕ್ಕಿನಿಂದ ವಂಚಿತರಾಗಬಾರದು ಎಂಬ ಆಶಯದೊಂದಿಗೆ ಚುನಾವಣಾ ಆಯೋಗದ ನಿರ್ದೇಶನದ ಅನುಸಾರ ನ.20 ಭಾನುವಾರದಂದು ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಹಾಗೂ ಹೊಸಕೋಟೆ ತಾಲೂಕುಗಳಲ್ಲಿ ಇರುವ ಎಲ್ಲಾ 1137 ಮತಗಟ್ಟೆಗಳ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯ ನಡೆಸಿದರು.

ಬರುವ ಡಿಸೆಂಬರ್ 3 ಶನಿವಾರ ಹಾಗೂ ಡಿಸೆಂಬರ್ 4 ಭಾನುವಾರದಂದು ಪುನಃ  ಜಿಲ್ಲೆಯಾದ್ಯಂತ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

18 ವರ್ಷ ತುಂಬಿದ ಹೊಸ ಮತದಾರರ ಸೇರ್ಪಡೆ, ವರ್ಗಾವಣೆ, ತೆಗೆದು ಹಾಕುವುದು ಆಧಾರ್ ಜೋಡಣೆ ಮತ್ತಿತರ ಕಾರ್ಯಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಾರ್ವಜನಿಕರು  ಮಾಡಿಕೊಳ್ಳಬಹುದು‌.

ವೋಟರ್ ಹೆಲ್ಪ್‌ಲೈನ್ ಮೊಬೈಲ್ ಆ್ಯಪ್ ಮೂಲಕವೂ ಈ ತಿದ್ದುಪಡಿಗಳನ್ನು ತ್ವರಿತವಾಗಿ ದಾಖಲಿಸಿಕೊಳ್ಳಲು ಮತದಾರರಿಗೆ ಮುಕ್ತ ಅವಕಾಶವಿದೆ ಎಂದು ತಿಳಿಸಿದ್ದಾರೆ.

ನವೆಂಬರ್ 9 ರಂದು ಸಮಗ್ರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 8 ರವರೆಗೆ ಅವಕಾಶವಿದೆ.ಡಿಸೆಂಬರ್ 26 ರೊಳಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು.

2023 ರ ಜನೆವರಿ 3 ರೊಳಗೆ ಆರೋಗ್ಯ ಮಾನದಂಡಗಳನ್ನು ಪರಿಶೀಲಿಸಿ,ಅಂತಿಮ ಮತದಾರರ ಪಟ್ಟಿಗೆ ಚುನಾವಣಾ ಆಯುಕ್ತರ ಅನುಮೋದನೆ ಪಡೆದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!