ಕೋಲಾರ, (ನ.22): ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಮಾಲೂರಿನಲ್ಲಿ ಪಂಚರತ್ನ ರಥಯಾತ್ರೆ ರೋಡ್‌ಶೋ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳೆಯರ ಪ್ರಾಮಾಣಿಕ ಅಭಿವೃದ್ಧಿಗೆ ಜೆಡಿಎಸ್ ಬದ್ದವಾಗಿದೆ. ಶಾಲೆಗೆ ಹೋಗುವ ಮಕ್ಕಳು ಬಂದು ನೀವು ಸಿಎಂ ಆಗ್ಬೇಕು ಅಂದರು, ಆರತಿ ಮಾಡಿದಾಗ ದಕ್ಷಿಣೆ ಕೊಟ್ಟಾಗ ದುಡ್ಡು ಬೇಡ ಒಳ್ಳೆ ಶಾಲೆ ಮಾಡಿ ಅಂತ ಮಕ್ಕಳು ಹೇಳಿದರು ಎಂದು ತಿಳಿಸಿದರು.

ಮುಂದೆ ದುಡ್ಡು ಕೊಟ್ಟು ಮತ ಪಡೆಯೋದನ್ನು ಜನ ನಿಷೇಧ ಮಾಡುತ್ತಾರೆ. ಐದು ವರ್ಷಗಳ ಆಡಳಿತ ಸಿಕ್ಕರೆ ಇನ್ಮುಂದೆ ಜನರು ಹಣವನ್ನು ಪಡೆಯಬಾರದು, ಆ ರೀತಿಯಾಗಿ ಜನರನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಮುಸ್ಲಿಂ ಸಮುದಾಯದವರು ಮುಖ್ಯಮಂತ್ರಿ ಕೂಡ ಆಗಬಹುದು. ಮುಸ್ಲಿಮರು ಯಾಕೆ ರಾಜ್ಯದ ಸಿಎಂ ಆಗಬಾರದು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
