ಪೊಲೀಸ್ ಇಲಾಖೆಯ ಬಹುದಿನಗಳ ಕನಸು ನನಸು.!!: ಗಂಜಿಗಟ್ಟಿ ಗ್ರಾಮ ವ್ಯಾಪ್ತಿಯಲ್ಲಿ ನೂತನ ಪೊಲೀಸ್ ಫೈರಿಂಗ್ ರೇಂಜ್ ಆರಂಭ

ಧಾರವಾಡ, (ನ.22): ಧಾರವಾಡ ಜಿಲ್ಲೆ ವಿಭಜನೆ ಆದಾಗಿನಿಂದ ಜಿಲ್ಲೆಯ ಪೊಲೀಸ್‍ರಿಗೆ ಫೈರಿಂಗ್ ತರಬೇತಿಗಾಗಿ ಒಂದು ಪ್ರತ್ಯೇಕ ಮೈದಾನವಿಲ್ಲದೇ ಅಭ್ಯಾಸಕ್ಕಾಗಿ ಹಾವೇರಿಗೆ ಹೋಗಬೇಕಿತ್ತು. ಈ ಸಮಸ್ಯೆಗೆ ಈಗ ಪರಿಹಾರ ಲಭಿಸಿದ್ದು, ಉತ್ತಮವಾದ ಗುಂಡು ಗುರಿ (ಫೈರೀಂಗ್) ಅಭ್ಯಾಸಕ್ಕೆ ಜಿಲ್ಲೆಯಲ್ಲಿ ಮೈದಾನ ಸಿದ್ಧವಾಗಿದೆ. 

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಗಂಜಿಗಟ್ಟಿ ಗ್ರಾಮ ಹುದ್ದೆಯಲ್ಲಿರುವ ಜಿಲ್ಲಾ ಪೊಲೀಸ್ ಇಲಾಖೆ ಮಾಲೀಕತ್ವದ ಸುಮಾರು ಹತ್ತು ಎಕರೆ ಜಮೀನದಲ್ಲಿ ಗುಂಡು ಗುರಿ (ಫೈರಿಂಗ್) ಅಭ್ಯಾಸಕ್ಕೆ ಸುಸಜ್ಜಿತ ಮೈದಾನ ಸಿದ್ಧಗೊಳಿಸಲಾಗಿದೆ. 

ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಎನ್.ಸತೀಶಕುಮಾರ ಫೈರಿಂಗ್ ರೇಂಜ್ ಉದ್ಘಾಟಿಸಿದರು.

ನಂತರ ಅವರು ಮಾತನಾಡಿ, ಪ್ರತಿ ವರ್ಷ ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗುಂಡು ಗುರಿ ಫೈರಿಂಗ್ ಅಭ್ಯಾಸ ಕಡ್ಡಾಯವಾಗಿದೆ. ಫೈರಿಂಗ್ ಅಭ್ಯಾಸದಿಂದ ಏಕಾಗ್ರತೆ, ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಗುಂಡು ಗುರಿ ನಿಖರವಾಗುತ್ತದೆ ಎಂದರು. ಪೊಲೀಸ್ ಸಿಬ್ಬಂದಿಗಳಿಗೆ ಸರಕಾರದ ಎಲ್ಲ ಸೌಲಭ್ಯಗಳು, ಜೀವನ ಭದ್ರತೆಗಳನ್ನು ತಲುಪಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ತಮ್ಮ ನಿಗಧಿತ ಕಾರ್ಯಗಳನ್ನು ತಪ್ಪದೇ ಮಾಡಬೇಕು. ಸಾರ್ವಜನಿಕರೊಂದಿಗೆ ಸಂಯಮದಿಂದ ಜನಸ್ನೇಹಿ ಆಗಿ ವರ್ತಿಸಿ, ಇಲಾಖೆಯ ವಿಶ್ವಾಸರ್ಹತೆ ಮತ್ತು ನಂಬಿಕೆಯನ್ನು ಸಾರ್ವಜನಿಕ ವಲಯದಲ್ಲಿ ಹೆಚ್ಚಿಸಬೇಕೆಂದು ಹೇಳಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಾಸರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಧಾರವಾಡ ಜಿಲ್ಲೆ ಪ್ರತ್ಯೇಕವಾದ ನಂತರ ಫೈರಿಂಗ್ ಅಭ್ಯಾಸಕ್ಕೆ ಜಿಲ್ಲೆಯಲ್ಲಿ ಸ್ಥಳವಿಲ್ಲದೆ ಸ್ವಲ್ಪಮಟ್ಟಿಗೆ ತೊಂದರೆ ಆಗಿತ್ತು. ಆದರೆ ಈಗ ಇಲಾಖೆ ಮಾಲಿಕತ್ವದ ಗಂಜಿಗಟ್ಟಿ ಗ್ರಾಮ ಸಮೀಪದ ಸುಮಾರು ಹತ್ತು ಎಕರೆ ಜಮೀನದಲ್ಲಿ ಗುಂಡು ಗುರಿ ಫೈರಿಂಗ್ ಅಭ್ಯಾಸಕ್ಕೆ ಮೈದಾನ ಸಿದ್ದಗೊಳಿಸಲಾಗಿದೆ.

ಸಣ್ಣ ಸಣ್ಣ ಗುಡ್ಡ, ಕುರಚಲು ಗಿಡಗಂಟಿಗಳಿಂದ ಕೂಡಿದ್ದ ಈ ಪ್ರದೇಶವನ್ನು ಅಗತ್ಯವಿರುವಷ್ಟು ಸಮತಟ್ಟುಗೊಳಿಸಲಾಗಿದೆ. ಫೈರಿಂಗ್ ಅಭ್ಯಾಸಕ್ಕೆ ಅನುಕೂಲವಾಗುವಂತೆ ತಗ್ಗು, ಎತ್ತರದ ಸ್ಥಳಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಜನರ ಓಡಾಟ, ದನ ಮೇಯಿಸುವುದು, ಇತರ ಕಾರ್ಯ ಚಟುವಟಿಕೆಗಳನ್ನು ನಿರ್ಭಂಧಿಸಲಾಗಿದೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಫೈರಿಂಗ್ ತರಬೇತಿಗೆ ಉತ್ತಮ ಸ್ಥಳವಾಗಿ ರೂಪಿಸಲಾಗಿದೆ.

ಇದರಿಂದ ಜಿಲ್ಲಾ ಪೊಲೀಸ್ ಇಲಾಖೆ ಜೊತೆಗೆ ಫೈರಿಂಗ್ ತರಬೇತಿ ಅಗತ್ಯವಿರುವ ಮಹಾನಗರ ಪೊಲೀಸ್, ಪೊಲೀಸ್ ತರಬೇತಿ ಶಾಲೆ, ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ, ಅರಣ್ಯ ತರಬೇತಿ ಅಕಾಡೆಮಿ, ಅಬಕಾರಿ ಇಲಾಖೆ, ಎನ್.ಸಿ.ಸಿ. ಸೇರಿದಂತೆ ಫೈರಿಂಗ್ ತರಬೇತಿ ಅಭ್ಯಾಸ ಅಗತ್ಯವಿರುವ ಇತರ ಇಲಾಖೆಗಳಿಗೂ ಈ ಮೈದಾನ  ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿವೈಎಸ್‍ಪಿಗಳಾದ ಎಂ.ಬಿ.ಸುಂಕದ, ಚಂದ್ರಕಾಂತ ಪೂಜಾರ, ಜಿ.ಸಿ.ಶಿವಾನಂದ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು, ಪೊಲೀಸ್ ಪೇದೆಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]