ಬೆಂಗಳೂರು (ನ.22): ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿರುವ ʼಕಾಂತಾರʼ ಸಿನಿಮಾ ಈಗಾಗಲೇ ಹಲವು ದಾಖಲೆಗಳನ್ನು ಉಡೀಸ್ ಮಾಡಿದೆ.

ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಪ್ರಮುಖ ಭಾಷೆಗಳಲ್ಲಿ ಹಾಗೂ ಹಿಂದಿಯಲ್ಲೂ ಡಬ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ʼಕಾಂತಾರʼ ಜಗತ್ತಿನಾದ್ಯಂತ 400 ಕೋಟಿ ಕಲೆಕ್ಷನ್ ಹೆಗ್ಗಳಿಕೆಗೆ ಪಾತ್ರವಾಗಿದೆ ಎನ್ನಲಾಗಿದೆ.

ಸೆ.30 ರಂದು ರಾಜ್ಯಾದಂತ್ಯ ತೆರೆ ಕಂಡ ʼಕಾಂತಾರʼ ಸಿನಿಮಾಕ್ಕೆ ದೊಡ್ಡ ಮಟ್ಟದಲ್ಲಿ ರೆಸ್ಪಾನ್ಸ್ ಸಿಕ್ಕಿತ್ತು. ರಜಿನಿಕಾಂತ್, ವಿವೇಕ್ ಅಗ್ನಿಹೋತ್ರಿ ಸೇರಿದಂತೆ ಬಿಟೌನ್ ಹಾಗೂ ಸೌತ್ ಸಿನಿರಂಗದ ಖ್ಯಾತನಾಮರು ಪ್ರಶಂಶಿಸಿದ್ದರು.
ಇತ್ತೀಚಿನ ಮಾಹಿತಿ ಅನ್ವಯ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ‘ಕಾಂತಾರ’ ಚಿತ್ರ ಓಟಿಟಿಯಲ್ಲಿ ಸಹ ಪ್ರದರ್ಶನ ಕಾಣಲಿದೆ ಎನ್ನಲಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
