ಚಿಕ್ಕಬಳ್ಳಾಪುರ ಜಿಲ್ಲೆಗೆ ಎರಡು ವೈದ್ಯಕೀಯ ಕಾಲೇಜು: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ, (ನ.23): 2022-23 ನೇ  ಸಾಲಿನಲ್ಲಿ  ಜಿಲ್ಲೆಯಲ್ಲಿ ಎರಡು ವೈದ್ಯಕೀಯ  ಕಾಲೇಜುಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದರು

ಅವರು ಬುಧವಾರ ಗೌರಿಬಿದನೂರು ನಗರದಲ್ಲಿ ವಿವಿಧ ಅಭಿವೃದ್ಧಿ  ಕಾಮಗಾರಿಗಳು ಹಾಗೂ ಕಾರ್ಯಕ್ರಮಗಳಿಗೆ  ಚಾಲನೆ ನೀಡುವ ವೇದಿಕೆ  ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಜಿಲ್ಲೆಯ ಸಮಸ್ತ  ಜನರ ಹೆಮ್ಮೆಯಾದ “ಸರ್ಕಾರಿ ವೈದ್ಯಕೀಯ  ಕಾಲೇಜು” ನಿರ್ಮಾಣ ಹಂತದಲ್ಲಿರುವ   ನೂತನ ಕಟ್ಟಡದಲ್ಲಿ ಮುಂದಿನ ಮೂರು  ತಿಂಗಳಲ್ಲಿ ಆರಂಭವಾಗಲಿದೆ ಜೊತೆಗೆ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ  ಸರಳ  ಮೆಡಿಕಲ್ ಕಾಲೇಜು ಸಹ 2023ರ ಮಾರ್ಚ್ ಅಂತ್ಯದಲ್ಲಿ ಆರಂಭವಾಗಿ ಜನರ ಸೇವೆಗೆ ಮುಕ್ತ ಆಗಲಿವೆ ಎಂದು ತಿಳಿಸಿದರು.

ಅರೋಗ್ಯವಂತ ಸಮಾಜವನ್ನು ಮಾತ್ರ  ಸಂಪತ್ ಭರಿತ ಸಮಾಜ ಅಂತಾ  ಕರೆಯಬಹುದು. ಅದಕ್ಕಾಗಿ ನಮ್ಮ ಸರ್ಕಾರ ಮುಂದಿನ ಡಿಸೆಂಬರ್ ಒಳಗೆ ನೂತನವಾಗಿ 438 “ನಮ್ಮ ಕ್ಲಿನಿಕ್” ಗಳನ್ನು  ತೆರೆಯುತ್ತಿದೆ. ಈಗಾಗಲೇ ರಾಜ್ಯದಲ್ಲಿ 1080 ಜನೌಷಧಿ  ಕೇಂದ್ರಗಳನ್ನು ತೆರೆಯುವ ಮೂಲಕ ಅತೀ  ಹೆಚ್ಚು ಕೇಂದ್ರಗಳನ್ನು ತೆರೆದು    ದೇಶದಲ್ಲಿಯೇ ಎರಡನೇ ಸ್ಥಾನಗಳಿಸಿದೆ, ಶೇ  80ರಷ್ಟು ರಿಯಾಯ್ತಿಯಲ್ಲಿ ಜನರಿಗೆ ಔಷಧಿಗಳನ್ನು ವಿತರಣೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕೇವಲ 6 ತಿಂಗಳು ಅಂತರದಲ್ಲಿ 1500 ವೈದ್ಯರನ್ನು ನೇಮಕ ಮಾಡಲಾಗಿದೆ ಜೊತೆಗೆ ಹೊರಗುತ್ತಿಗೆ ಆಧಾರದಲ್ಲಿ 2,800 ವೈದ್ಯರು, 1,200 ತಜ್ಞ ವೈದ್ಯರು ಸೇರಿದಂತೆ  ಒಟ್ಟು  4 ಸಾವಿರ ವೈದ್ಯರನ್ನು ನೇಮಕ  ಮಾಡಲಾಗಿದೆ. ಸರ್ಕಾರದ ಪ್ರತಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು  ಹಾಸಿಗೆಗಳನ್ನು ಆಮ್ಲಜನಕ ಸಹಿತ  ಹಾಸಿಗೆಗಳನ್ನಾಗಿಸಿ ಅರೋಗ್ಯ ಸೇವೆ  ನೀಡಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಉನ್ನತ ಸೌಕರ್ಯಗಳನ್ನು ಒದಗಿಸಲಾಗಿದೆ. ಸುಸಜ್ಜಿತ  ವೈದ್ಯಕೀಯ ಯಂತ್ರೋಪಕರಣಗಳನ್ನು  ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಲಾಗಿದೆ ಎಂದರು.

1.20 ಕೋಟಿ ಅಯುಷ್ಮಾನ್  ಕಾರ್ಡ್ ಸಿದ್ದ: ಸುಸಜ್ಜಿತ ಉನ್ನತ ಆಸ್ಪತ್ರೆಗಳಲ್ಲಿ 5 ಲಕ್ಷ   ರೂ  ಮೊತ್ತದ ಉಚಿತ ಅರೋಗ್ಯ ಸೇವಾ  ಸೌಲಭ್ಯವನ್ನು ಒದಗಿಸುವ  1.20 ಕೋಟಿ  ಕಾರ್ಡ್ ಗಳನ್ನು ವಿತರಣೆಗೆ  ಸಿದ್ದಪಡಿಸಲಾಗಿದೆ, ಶೀಘ್ರದಲ್ಲೇ ಮಾನ್ಯ  ಮುಖ್ಯಮಂತ್ರಿಗಳ ದಿನಾಂಕ ಪಡೆದು ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಉಚಿತವಾಗಿ ವಿತರಣೆ ಮಾಡುವ ಕಾರ್ಯ  ಆಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಸಣ್ಣ  ಕೈಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ  ಸಚಿವ ಎನ್.ನಾಗರಾಜ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಅಮೃತ ಯೋಜನೆಯಡಿ 8 ಸಾವಿರ ಕೋಟಿ ಅನುದಾನವನ್ನು ನೀಡಲಾಗುತ್ತಿದೆ. ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಜಲಜೀವನ್ ಮಿಷನ್  ಯೋಜನೆಯಡಿ ಕುಡಿಯುವ ನೀರು ನೀಡಲು ಯೋಜಿಸಲಾಗಿದೆ. ದೇಶದ ಸಮಸ್ತ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಈ ಕಾರ್ಯಕ್ಕೆ ಮಾನ್ಯ ಪ್ರಧಾನಮಂತ್ರಿಗಳಿಗೆ ಮತ್ತು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಗೌರಿಬಿದನೂರು ನಗರಸಭೆ ವ್ಯಾಪ್ತಿಯಲ್ಲಿ 2022-2023ನೇ ಸಾಲಿನ 15ನೇ ಹಣಕಾಸು ಆಯೋಗದ ಅನುದಾನದಡಿ ಸುಮಾರು 2ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಗೌರಿಬಿದನೂರು ನಗರದಲ್ಲಿ ಶಂಕುಸ್ಥಾಪನೆ ಕಾರ್ಯಗಳನ್ನು  ನೆರವೇರಿಸಲಾಗಿದೆ ಎಂದರು.

ಗೌರಿಬಿದನೂರು ಶಾಸಕ ಎನ್. ಎಚ್  ಶಿವಶಂಕರ್ ರೆಡ್ಡಿ ಮಾತನಾಡಿ, ಗೌರಿಬಿದನೂರು ನಗರದಲ್ಲಿ ಒಂದು ರಕ್ತ ನಿಧಿ ಕೇಂದ್ರ ತೆರೆಯಲು, ನಾಮಗೊಂಡ್ಲು ಗ್ರಾಮದಲ್ಲಿ ಮಾದರಿ ಅರೋಗ್ಯ ಕೇಂದ್ರ ತೆರೆಯಲು, ಅಯುಷ್ಮಾನ್ ಯೋಜನೆಯ ಕುರಿತು ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸಲು ಹಾಗೂ ಗೌರಿಬಿದನೂರು ವಿಧಾನ ಸಭಾ  ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ  ಕಾಮಗಾರಿಗಳನ್ನು ಕೈಗೊಳ್ಳಲು ಸಚಿವರುಗಳಲ್ಲಿ ಮನವಿ ಮಾಡಿದರು.

ಇಂದು ಚಾಲನೆ ಗೊಂಡ ಕಾಮಗಾರಿಗಳು: ಗೌರಿಬಿದನೂರು ನಗರದಲ್ಲಿ  27 ಕೋಟಿ  ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸಾರ್ವಜನಿಕ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ.

ಕಾದಲವೇಣಿ ಗ್ರಾಮದಲ್ಲಿ ಹಾಗೂ  ಹಿರೇಬಿದನೂರಿನಲ್ಲಿ 1.10 ಕೋಟಿ  ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರ” ಗಳ ಕಟ್ಟಡಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ.

ಗೌರಿಬಿದನೂರು ನಗರಸಭೆ ವ್ಯಾಪ್ತಿಯಲ್ಲಿ 2022-2023ನೇ ಸಾಲಿನ 15ನೇ ಹಣಕಾಸು ಆಯೋಗದ ಅನುದಾನದಡಿ ಸುಮಾರು 2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು  ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು  ವೈನ್ ಬೋರ್ಡ್ ನ ಅಧ್ಯಕ್ಷ ಎಂ. ರವಿನಾರಾಯಣ ರೆಡ್ಡಿ, ಗೌರಿಬಿದನೂರು  ನಗರಸಭೆ ಅಧ್ಯಕ್ಷಿಣಿ ರೂಪ ಅನಂತರಾಜು, ಗೌರಿಬಿದನೂರು ನಗರ ಯೋಜನಾ  ಪ್ರಾಧಿಕಾರದ ಅಧ್ಯಕ್ಷ ವೇಣುಗೋಪಾಲ ರೆಡ್ಡಿ  ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು  ತಾಲೂಕು ಮಟ್ಟದ ಅಧಿಕಾರಿಗಳು, ಸಾವಿರಕ್ಕೂ ಹೆಚ್ಚು ಸಾರ್ವಜನಿಕರು    ಪಾಲ್ಗೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!