ಬೆಂ.ಗ್ರಾ.ಜಿಲ್ಲೆ, (ನ.23): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿಯ ಸಹಯೋಗದೊಂದಿಗೆ ನವೆಂಬರ್ 25 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ.

ಗ್ರಾಮೀಣ ಕ್ರೀಡಾಕೂಟದಲ್ಲಿ ಖೋ ಖೋ(ಪುರುಷ ಮತ್ತು ಮಹಿಳೆಯರ ತಂಡ), ಕಬಡ್ಡಿ(ಪುರುಷ ಮತ್ತು ಮಹಿಳೆಯರ ತಂಡ), ವಾಲಿಬಾಲ್(ಪುರುಷ ಮತ್ತು ಮಹಿಳೆಯರ ತಂಡ), ಕುಸ್ತಿ (ಪುರುಷ ಮತ್ತು ಮಹಿಳೆಯರ ತಂಡ) ಹಾಗೂ ಯೋಗ(ಪುರುಷ ಮತ್ತು ಮಹಿಳೆಯರ ತಂಡ) ಕ್ರೀಡೆಗಳನ್ನು ಆಯೋಜಿಸಲಾಗುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಒಟ್ಟು 28 ಗ್ರಾಮ ಪಂಚಾಯಿತಿಯಲ್ಲಿ ಇರುವ ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರುವ ಉದ್ದೇಶದಿಂದ ಹಾಗೂ ಗ್ರಾಮೀಣ ಕ್ರೀಡೆಗಳನ್ನು ಪೋಷಿಸುವ ಉದ್ದೇಶದಿಂದ ಈ ಸಾಲಿನಲ್ಲಿ ಮುಖ್ಯಮಂತ್ರಿಗಳ ಆಶಯದಂತೆ ಗ್ರಾಮೀಣ ಕ್ರೀಡಾಕೂಟಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ.
ಗ್ರಾಮ ಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ ಮತ್ತು ರಾಜ್ಯ ಮಟ್ಟದವರೆಗೆ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗುತ್ತಿದೆ. ವಿಜೇತರಾಗುವವರಿಗೆ ಬಹುಮಾನಗಳನ್ನು ಸಹ ನೀಡಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕಿ ಗೀತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
