ಮೈಸೂರು, (ನ.23): ದಸರಾ ಗಜಪಡೆಯ ಆಕರ್ಷಣೀಯ ಕೇಂದ್ರಬಿಂದುಗಳಲ್ಲಿ ಒಂದಾದ ಗೋಪಾಲಸ್ವಾಮಿ ಆನೆ ಕಾಡಾನೆ ಜೊತೆಗಿನ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿ ಬಳಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡು ಗೋಪಾಲಸ್ವಾಮಿ ಆನೆ ಸಾವನಪ್ಪಿದೆ.
ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆ ಜೊತೆ ಕಾದಾಟ ನಡೆಸಿ ಗೋಪಾಲಸ್ವಾಮಿ ಆನೆ ಮೃತಪಟ್ಟಿದೆ.
ಇತ್ತೀಚೆಗಷ್ಟೆ ನಡೆದ ಮೈಸೂರು ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು. ತನ್ನ ಶಾಂತ ಸ್ವಭಾವಕ್ಕೆ ಈ ಆನೆ ಜನರ ಪ್ರೀತಿ ಗಳಿಸಿತ್ತು. ಈ ಬಾರಿ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.
ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ನೌಪತ್ ಆನೆಯಾಗಿ ಹೆಜ್ಜೆ ಹಾಕಿದ್ದ ಗೋಪಾಲಸ್ವಾಮಿ ಎಲ್ಲರಿಂದ ಪ್ರಶಂಸೆ ಗಿಟ್ಟಿಸಿತ್ತು.
ಪೊಟೋ ಕೃಪೆ: ಮೈ ಮೈಸೂರು ಫೇಸ್ಬುಕ್ ಪೇಜ್.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

