ದೊಡ್ಡಬಳ್ಳಾಪುರ, (ನ.27): ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ನೆನಪಿನಲ್ಲಿ ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ಅಸ್ಥಿತ್ವಕ್ಕೆ ತರಲಾಗಿದ್ದು, ನವೆಂಬರ್ 27ರಂದು ಉದ್ಘಾಟನೆಗೊಳ್ಳಲಿದೆ ಎಂದು ವೇದಿಕೆಯ ಗೌರವ ಅಧ್ಯಕ್ಷ ಟಿ.ಜಿ.ಮಂಜುನಾಥ್ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು,
ರಾಜ್ಯ ಮಟ್ಟದಲ್ಲಿ ಸಂಘಟನೆಯಾಗಿ ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ವಿಸ್ತರಣೆಯಾಗಿದ್ದು, ದೊಡ್ಡಬಳ್ಳಾಪುರ ತಾಲೂಕು ಒಂದರಲ್ಲಿಯೇ ಸುಮಾರು 500ಕ್ಕೂ ಹೆಚ್ಚು ಮಂದಿ ಸದಸ್ಯರಾಗಿದ್ದಾರೆ.
ಈ ನಿಟ್ಟಿನಲ್ಲಿ ನವೆಂಬರ್ 27ರಂದು ನಗರದ ಡಿ.ಕ್ರಾಸ್ ವೃತ್ತದಲ್ಲಿನ ರಾಜ್ಯ ಕಾರ್ಯಾಲಯದಲ್ಲಿ ಸಂಘದ ಉದ್ಘಾಟನೆ ಹಾಗೂ ದ್ವಜಾರೋಹಣವನ್ನು ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹರೀಶ್ ಗೌಡ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ನೆರವೇರಿಸಲಿದ್ದಾರೆ.
ಅದೇ ದಿನ ಸಮಾರೋಪ ಸಮಾರಂಭ ನಡಯಲಿದ್ದು, ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು, ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಎನ್.ನಾಗರಾಜು, ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.
ಈ ವೇಳೆ ನೂತನ ಸದಸ್ಯರ ಸೇರ್ಪಡೆ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಡಿ.ಸಿ.ಬಾಬು, ರಾಜ್ಯ ಸಂಚಾಲಕ ನಾಗರಾಜ್, ರಾಜ್ಯ ಸಹ ಕಾರ್ಯದರ್ಶಿ ರಾಮಾಂಜಿನಪ್ಪ, ರಾಜ್ಯ ಉಪಾಧ್ಯಕ್ಷ ಮಂಜುನಾಥ್, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಪದ್ಮಾ, ಸಂಚಾಲಕ ಬಾಬು, ತಾಲೂಕು ಅಧ್ಯಕ್ಷ ರವಿಕುಮಾರ್, ಸಂಘಟನಾ ಉಪಾಧ್ಯಕ್ಷ ಚಂದನ್, ತಾಲೂಕು ಕಾರ್ಯದರ್ಶಿ ರಾಮಚಂದ್ರ, ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ರವಿಕುಮಾರ್, ತೂಬಗೆರೆ ಹೋಬಳಿ ಅಧ್ಯಕ್ಷ ಲೋಕೇಶ್ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

