ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ: ಬಸವರಾಜ ಬೊಮ್ಮಾಯಿ

ಬೆಂಗಳೂರು, (ನ.25): ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಅವರು ಗುರುವಾರ ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಐಮಾ ಎಕ್ಸ್ ಪೋ ( AIAMA )2022 ಉದ್ಘಾಟಿಸಿ ಮಾತನಾಡಿದರು.

ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಈ  ಉದ್ಯಮ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ರಾಜ್ಯ ಸರ್ಕಾರವು ಸಣ್ಣ ಪುಟ್ಟ ಸಮುದಾಯಗಳಾದ ಕುಂಬಾರ ಕಮ್ಮಾರ, ಚಮ್ಮಾರ ಸೇದಂತೆ ಇತರ ಸಮುದಾಯಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಆರ್ಥಿಕತೆ ಕೆಳ ಸ್ಥರದಿಂದ ಬಲಗೊಳ್ಳುತ್ತದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. 

ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ: ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ ಮಾಡುತ್ತಿದೆ. 250 ವರ್ಷಗಳಿಂದ ಪರಿಮಳದ ಜೊತೆಗೆ ಸಂತೋಷ ಹರಡುತ್ತಿದ್ದೀರಿ. ಯಾವುದೇ ಉದ್ಯಮ ಈ ರೀತಿ ಇಲ್ಲ. ಸಣ್ಣ ಸಣ್ಣ ಸಂತೋಷಗಳು ದೊಡ್ಡ ಸಂಭ್ರಮ ನೀಡುತ್ತಿವೆ.

ಅಗರಬತ್ತಿ ಉದ್ಯಮಮಕ್ಕೆ ದೊಡ್ಡ ಇತಿಹಾಸವಿದೆ. ಇದೊಂದು ದೊಡ್ಡ ವಿಜ್ಞಾನ. ಪಶ್ಚಿಮಾತ್ಯ ದೇಶಗಳಲ್ಲಿ  ಕೃತಕ ಪರಿಮಳ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಭಾರತ ಜೀವ ವೈವಿಧ್ಯವಿರುವ ದೇಶ. ನಮ್ಮಲ್ಲಿ ಪ್ರಾಕೃತಿಕವಾಗಿಯೇ ಪರಿಮಳ ಬೀರುವ ಉತ್ಪನ್ನಗಳು ದೊರೆಯುತ್ತಿವೆ. ನನ್ನ  ಕ್ಷೇತ್ರದಲ್ಲಿಯೂ ಒಬ್ಬರು ಸುಮಾರು 2000 ಎಕರೆ ಪ್ರದೇಶದಲ್ಲಿ  ಪುಷ್ಪ ಕೃಷಿ ಮಾಡುತ್ತಿದ್ದಾರೆ ಎಂದರು.

ಮಹಿಳೆಯರಿಗೆ ಉದ್ಯೋಗಾವಕಾಶ: ನಮ್ಮ ಸರ್ಕಾರ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದೆ ಅವರಿಗೆ 1.5 ಲಕ್ಷ ಸರ್ಕಾರ ನೀಡುತ್ತದೆ. 5 ಲಕ್ಷದವರೆಗೆ ಅನುದಾನ ನೀಡಲಾಗುತ್ತಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೊಗ ಕಲ್ಪಿಸಲು ಅನುಕೂಲವಾಗುತ್ತದೆ. ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಾರೆ. ಅವರು ಉತ್ಪಾದನೆಯಲ್ಲಿ ತೊಡಗಿದರೆ ಕುಟುಂಬದಲ್ಲಿ ಹೆಚ್ಚಿನ ಉಳಿತಾಯವಾಗಲಿದೆ.

ಮಹಿಳೆಯರು ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು. ಮಹಾತ್ಮಾ ಗಾಂಧಿ ಹೆಚ್ಚಿನ ಜನರಿಂದ ಉತ್ಪಾದನೆಯಾಗಬೇಕು ಎಂದು ಹೇಳಿದ್ದರು ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,  ಐಮಾ ಅಧ್ಯಕ್ಷ ಅರ್ಜುನ್ ರಂಗಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]