ದೇವನಹಳ್ಳಿ, (ನ.28): ಪಕ್ಷ ಸಂಘಟನೆಗಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಪಂಚರತ್ನ’ ರಥಯಾತ್ರೆ ಇಂದು ದೇವನಹಳ್ಳಿಗೆ ಆಗಮಿಸಿದೆ.
ಕೊಡುಗುರ್ಕಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬೃಹತ್ ಚಕ್ಕೋತ ಹಾರ ಹಾಕಿದ ಕಾರ್ಯಕರ್ತರು, ಪೂರ್ಣಕುಂಭ, ಕಲಾತಂಡಗಳ ಮೂಲಕ ಅದ್ಧೂರಿ ಸ್ವಾಗತ ಕೋರಿದರು.
ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಸೇರಿದಂತೆ ಈ ಭಾಗದ ಮುಖಂಡರು ಹಾಜರಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

