ದೊಡ್ಡಬಳ್ಳಾಪುರ, (ನ.28): ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಹುಲಿಕುಂಟೆ ಸಮೀಪ ಸಂಭವಿಸಿದೆ.
ಮೃತ ದ್ವಿಚಕ್ರ ವಾಹನ ಸವಾರರ ಗುರುತು ಪತ್ತೆಯಾಗಿಲ್ಲವಾಗಿದ್ದು, ಅಪಘಾತ ನಡೆಸಿ ಪರಾರಿಯಾಗುತ್ತಿದ್ದ ಲಾರಿಯನ್ನು ಬೆನ್ನತ್ತಿದ ವಾಹನ ಸವಾರರು, ಪೊಲೀಸರಿಗೆ ಒಪ್ಪಿಸಿದ್ದಾರೆಂದು ತಿಳಿದುಬಂದಿದೆ.
ಅಫಘಾತದ ಹಿನ್ನಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗುತ್ತಿದ್ದಾರೆ.
ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಜ್ಞಾನ ಮೂರ್ತಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.
(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

