ಜನತಾದರ್ಶನ: ಉಪನಗರವಾಗಿ ನೆಲಮಂಗಲದ ಸಮಗ್ರ ಅಭಿವೃದ್ಧಿಗೆ ಕ್ರಮ – ಸಚಿವ ಡಾ.ಕೆ.ಸುಧಾಕರ್

ಬೆಂ.ಗ್ರಾ.ಜಿಲ್ಲೆ(ನ.29): ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡು ಅತಿವೇಗವಾಗಿ ಬೆಳೆಯುತ್ತಿರುವ ನೆಲಮಂಗಲ ಪಟ್ಟಣವನ್ನು ಸ್ಯಾಟಲೈಟ್ ಟೌನ್ ಆಗಿ ಪರಿವರ್ತಿಸಿ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಉಪನಗರ ರೈಲು  ಹಾಗೂ ಮೆಟ್ರೋ ರೈಲುಗಳ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ,ಕುಟುಂಬ ಕಲ್ಯಾಣ ,ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ‌.ಸುಧಾಕರ್ ಹೇಳಿದರು.

ನೆಲಮಂಗಲದ ತಾಲೂಕು ಪಂಚಾಯಿತಿ ಆವರಣದಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.

ರಾಜಧಾನಿ ಬೆಂಗಳೂರು ಸುತ್ತ ಮುತ್ತಲಿನ 7-8 ನಗರಗಳನ್ನು ಸ್ಯಾಟಲೈಟ್ ನಗರಗಳನ್ನಾಗಿ ಅಭಿವೃದ್ಧಿ ಪಡಿಸುವ ಉದ್ದೇಶ ಸರ್ಕಾರಕ್ಕಿದೆ. ಇವುಗಳಲ್ಲಿ ನೆಲಮಂಗಲ ನಗರವೂ ಪ್ರಮುಖವಾಗಿದೆ.ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳ ಮೂಲಸೌಕರ್ಯಗಳ ಹೆಚ್ಚಳಕ್ಕೆ ಸರ್ಕಾರ ಆದ್ಯತೆ ನೀಡಿದೆ. ರಾಜ್ಯದ ಪ್ರತಿಯೊಂದು ತಾಲೂಕುಗಳಲ್ಲಿ 20 ರಿಂದ 30 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸುಮಾರು 500 ಕೋಟಿ ರೂ.ಗಳನ್ನು ಸರ್ಕಾರ ಒದಗಿಸಿದೆ.ನಗರ ಪ್ರದೇಶಗಳ ಕೊಳಗೇರಿಗಳಲ್ಲಿ ವಾಸಿಸುವ ಬಡಜನರಿಗೆ ಆರೋಗ್ಯ ಸೇವೆಗಳನ್ನು ಒದಗಿಸಲು “ನಮ್ಮ ಕ್ಲಿನಿಕ್” ಗಳಿಗೆ ಬರುವ ಡಿಸೆಂಬರ್ 14 ರಂದು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುವರು. ಅದೇ ದಿನ ರಾಜ್ಯದ ನೂರು ತಾಲೂಕುಗಳಲ್ಲಿ ನೂರು “ನಮ್ಮ ಕ್ಲಿನಿಕ್” ಗಳು ಕಾರ್ಯಾರಂಭ ಮಾಡಲಿವೆ ಎಂದರು.

ಜನತಾ ದರ್ಶನ ಕಾರ್ಯಕ್ರಮವು ಜನಸ್ನೇಹಿ, ಜನೋಪಯೋಗಿ ಆಡಳಿತ ನೀಡಲು ಸಹಕಾರಿಯಾಗಿವೆ.ಕಂದಾಯ ಇಲಾಖೆಯ ಸೇವೆಗಳು, ಭೂ ದಾಖಲೆಗಳ ಮಾಪನ,ಸರ್ವೆ ಸ್ಕೆಚ್, ತಿದ್ದುಪಡಿ, ಪೌತಿಖಾತೆ, ಸಾಗುವಳಿ ಚೀಟಿ ಮೊದಲಾದ ಕಾರ್ಯಗಳಿಗೆ ವೇಗ ಒದಗಿಸಲು ಸಾಧ್ಯವಾಗಿದೆ. ಬರುವ ತಿಂಗಳಿನಿಂದ ನಿರಂತರವಾಗಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಶ್ರಮಿಸಲಾಗುವುದು. ಜಿಲ್ಲೆಯ ಎಲ್ಲಾ ಗ್ರಾಮಾಂತರ ಪ್ರದೇಶಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಒದಗಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಅಪಘಾತದಲ್ಲಿ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ: ದೊಡ್ಡಬಳ್ಳಾಪುರ-ನೆಲಮಂಗಲ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದ್ವಿಚಕ್ರ ವಾಹನ ಸವಾರರಾದ ಮಾರುತಿ ಹಾಗೂ ಮಹೇಶ ಅವರ ಕುಟುಂಬದ ವಾರಸುದಾರರಿಗೆ ತಲಾ 25 ಲಕ್ಷ ರೂ.ಪರಿಹಾರ ನೀಡಲು ಬಿಬಿಎಂಪಿಗೆ ಸೂಚಿಸಲಾಗಿತ್ತು.ಮೊದಲ ಹಂತದಲ್ಲಿ ಇಂದು ತಲಾ 10 ಲಕ್ಷ ರೂ.ಪರಿಹಾರದ ಚೆಕ್ ನೀಡಲಾಗುತ್ತಿದೆ.ಉಳಿದ ಪರಿಹಾರ ಮೊತ್ತ ಶೀಘ್ರ ನೀಡಲು ನಿರ್ದೇಶನ ನೀಡಲಾಗಿದೆ ಎಂದರು.

ನಿವೇಶನಗಳ ಹಕ್ಕು ಪತ್ರ,ಮದಲಕೋಟೆ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿ, ಗ್ರಾಮಗಳ ನಕಾಶೆ, ಸರ್ವೆ, ವಿಕಲಚೇತನರೊಬ್ಬರಿಗೆ ನಗರಸಭೆಯ ಮೂಲಕ ಪೆಟ್ಟಿಗೆ ಅಂಗಡಿ ಒದಗಿಸುವುದು, ಪತ್ರಿಕಾ ಭವನ ನಿರ್ಮಾಣ ಸೇರಿದಂತೆ ಅನೇಕ ಅಹವಾಲುಗಳನ್ನು ಸಚಿವರು ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ, ಉಪವಿಭಾಗಾಧಿಕಾರಿ ತೇಜಸ್‌ಕುಮಾರ, ತಹಶೀಲ್ದಾರ್ ಮಂಜುನಾಥ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮೋಹನ್ ಮತ್ತಿತರರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!