ದೊಡ್ಡಬಳ್ಳಾಪುರ, (ನ.30): ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢ ಶಾಲೆ ಬಾಶೆಟ್ಟಿಹಳ್ಳಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಎ.ಜೆ.ವಿನುತಾ, ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದಾರೆ.

ಈ ಮುಂಚೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಯುವಸಂಸತ್ತು ಸ್ವರ್ಧೆಗೆ ಆಯ್ಕೆಯಾಗಿದ್ದ ವಿನುತಾ, ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ, ಉತ್ತಮ ಪ್ರದರ್ಶನ ನೀಡಿ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದಲ್ಲಿ ಆಯ್ಕೆಯಾದ ವಿಧ್ಯಾರ್ಥಿನಿ ವಿನುತಾ ಅವರನ್ನು ಕ್ಷೇತ್ರಶಿಕ್ಷಣಧಿಕಾರಿ ಆರ್.ರಂಗಪ್ಪ ಸೇರಿದಂತೆ ಶಾಲೆಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
