ಡಿಸೆಂಬರ್ 03 ರಂದು ಜಿಲ್ಲಾಡಳಿತ ಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

ಬೆಂ.ಗ್ರಾ.ಜಿಲ್ಲೆ, (ಡಿ.01): ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವೆ ಸಂಸ್ಥೆಗಳ ಸಹಯೋಗದಲ್ಲಿ “ವಿಶ್ವ ವಿಕಲಚೇತನರ ದಿನಾಚರಣೆ-2022” ಕಾರ್ಯಕ್ರಮವನ್ನು ಡಿಸೆಂಬರ್ ೦3 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಣೆ ಮಾಡಲಿದ್ದಾರೆ.

ಪೌರಾಡಳಿತ, ಸಣ್ಣ ಕೈಗಾರಿಕೆಗಳ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜ್(ಎಂ.ಟಿ.ಬಿ), ಗಣಿ ಮತ್ತು ಭೂವಿಜ್ಙಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರ ಘನ ಉಪಸ್ಥಿತಿಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ದೇವನಹಳ್ಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎ.ರವಿ, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಮುನಿರಾಜು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಕ.ನ.ನೀ.ಸ. ಮತ್ತು ಒ.ಚ.ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಕೆ.ಪಿ.ಮೋಹನ್ ರಾಜ್, ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೌರಮ್ಮ ರಾಮಣ್ಣ, ಉಪಾಧ್ಯಕ್ಷರಾದ ಸಿ.ಕಾಂತ ಮುನಿರಾಜು.ವಿ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಪ್ರಗತಿಪರ ಸಂಘಟನೆಗಳು, ಎಲ್ಲಾ ವಿವಿಧೋದ್ದೇಶ / ನಗರ / ಗ್ರಾಮೀಣ ಪುರ್ನವಸತಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!