ದೊಡ್ಡಬಳ್ಳಾಪುರ ಜೆಡಿಎಸ್ ನಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ..!!: ಮುನೇಗೌಡರಿಗೆ ಟಿಕೆಟ್ ನೀಡಿದರೆ ಸೋಲು ಖಚಿತವೆಂದ ಹುಸ್ಕೂರು ಆನಂದ್

ದೊಡ್ಡಬಳ್ಳಾಪುರ, (ನ.01): ಹೊರ ತಾಲೂಕಿನವರಾದ ಮುನೇಗೌಡರಿಗೆ ಮತ್ತೆ ಜೆಡಿಎಸ್ ಪಕ್ಷದಿಂದ ಟಿಕೆಟ್ ನೀಡಿದರೆ ಸೋಲು ಖಚಿತವಾಗಿದ್ದು, ಸ್ಥಳೀಯ ಆಕಾಂಕ್ಷಿಗಳಿಗೆ ಟಿಕೆಟ್ ನೀಡುವಂತೆ ಜೆಡಿಎಸ್ ಮುಖಂಡರಾದ ಹುಸ್ಕೂರು ಆನಂದ್ ಒತ್ತಾಯಿಸುವ ಮೂಲಕ, ಇತ್ತೀಚಿಗಷ್ಟೇ ಒಗ್ಗಟ್ಟು ಪ್ರದರ್ಶಿಸಿದ್ದ ಜೆಡಿಎಸ್ ಮುಖಂಡರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಬಯಲಾಗಿದೆ. 

ಗುರುವಾರ ನಗರದಲ್ಲಿನ ಅವರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹುಸ್ಕೂರು ಆನಂದ್, ಪಂಚ ರತ್ನ ರಥಯಾತ್ರೆಯಲ್ಲಿ ಮುನೇಗೌಡ ಹಾಗೂ ಅವರ ಸಹೋದರ ತಮ್ಮ ಬೆಂಬಲಿಗರ ಮೂಲಕ, ನನ್ನ ಬೆಂಬಲಿಗರ ಮೇಲೆ ದೌರ್ಜನ್ಯ ನಡೆಸಿ ಕಾರ್ಯಕ್ರಮ ಆಯೋಜನೆಗೆ ಅಡ್ಡಿ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಪಂಚರತ್ನ ರಥ ಯಾತ್ರೆಗೆ ಕುರಿತಂತೆ ಹಿರಿಯ ಮುಖಂಡರಾದ ಹೆಚ್.ಅಪ್ಪಯ್ಯಣ್ಣ ನೇತೃತ್ವದಲ್ಲಿ ಒಟ್ಟಾಗಿ ಸಭೆ ನಡೆಸಲಾಗಿದ್ದು, ಆ ವೇಳೆ ಆರೂಢಿ, ಹೊಸಹಳ್ಳಿ ನನ್ನ ಆಯೋಜನೆಗೆ, ದೊಡ್ಡಬೆಳವಂಗಲ, ದೊಡ್ಡಬಳ್ಳಾಪುರದಲ್ಲಿ ಹರೀಶ್ ಗೌಡ ಆಯೋಜಿಸುವುದು, ಹಾಗೂ ಮಧುರೆಯಲ್ಲಿ ಮುನೇಗೌಡ ಅವರು ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಆರೂಢಿಯಲ್ಲಿ ಕಾರ್ಯಕ್ರಮವನ್ನು ಆಯೋಜನೆಗೆ ಬಿಡದೆ ಬೆಂಬಲಿಗರ ಮೂಲಕ ಬೆದರಿಕೆಯೊಡ್ಡಿದ್ದಾರೆ.

ಆರೂಢಿಯಲ್ಲಿ ಬ್ಯಾನರ್ ಅಳವಡಿಕೆ, ಪ್ರತ್ಯೇಕ ವೇದಿಕೆ ನಿರ್ಮಾಣ, ಕ್ಯಾಪ್ಸಿಕಂ ಹಾರಕ್ಕೆ ಬದಲಾಗಿ ಜೋಳದ ಹಾರ ತರುವ ಮೂಲಕ ಸಭೆಯ ನಿರ್ಣಯವನ್ನು ಧಿಕ್ಕರಿಸಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಇದು ಮುನೇಗೌಡರ ಪವರ್ ಎಂದು ನನ್ನ ಹಾಗೂ ನನ್ನ ಬೆಂಬಲಿಗರನ್ನು ಅವಮಾನಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸ್ಥಳೀಯರನ್ನು ಹೊರತು ಪಡಿಸಿ, ಮತ್ತೆ ಮುನೇಗೌಡ ಅವರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ ಸೋಲುಂಟಾಗಲಿದೆ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಸ್ಥಳೀಯರಿಗೆ ಚುನಾವಣೆಗೆ ಟಿಕೆಟ್ ನೀಡಬೇಕಿದೆ. ಈಗಾಗಲೇ ತಾಲೂಕಿನಲ್ಲಿ ಪಕ್ಷ ಸಂಘಟನೆ ಮಾಡಲಾಗಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ.

ರಾಜಘಟ್ಟದಲ್ಲಿ ನಡೆದ ಪಂಚ ರತ್ನ ರಥ ಯಾತ್ರೆಯ ವೇಳೆ ಮುನೇಗೌಡರ ಪುತ್ರ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಆ ಮೂಲಕ ಅಧಿಕಾರವಿಲ್ಲದೆಯೇ ತಮ್ಮ ಮನಸ್ಥಿತಿ ಬಯಲು ಮಾಡಿದ್ದು, ಇಂತವರಿಗೆ ಅಧಿಕಾರ ದೊರಕಿದರೆ ತಾಲೂಕಿನಲ್ಲಿ ಅಶಾಂತಿ ಸೃಷ್ಠಿಯಾಗಲಿದೆ. ಇದನ್ನು ತಪ್ಪಿಸಲು ನಾ ದನಿ ಎತ್ತಿರುವೆ.

ಇಂದು ಸುದ್ದಿಗೋಷ್ಠಿ ನಡೆಸುತ್ತಿರುವ ವಿಷಯ ಪಕ್ಷದ ಹಿರಿಯ ಮುಖಂಡರಾದ ಅಪ್ಪಯ್ಯಣ್ಣ ಅವರಿಗೂ ತಿಳಿಸಿದ್ದು, ನನಗಾದ ಅವಮಾನವನ್ನು ತಿಳಿಸಲು ಅನುಮತಿ ನೀಡಿದ್ದಾರೆ.

ಈಗಾಗಲೇ ಮುನೇಗೌಡ ಹಾಗೂ ಅವರ ಸಹೋದರ ರಾಜಗೋಪಾಲ್ ಅವರ ದೌರ್ಜನ್ಯದ ಕುರಿತು ಹೊಸಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ದೂರು ನೀಡಲಾಗಿದೆ. ರಥ ಯಾತ್ರೆಗೆ ತೊಂದರೆಯಾಗಬಾರದೆಂದು ಮೌನಕ್ಕೆ ಶರಣಾಗಿದ್ದೆ ಎಂದು ಆನಂದ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪುಟ್ಟ ಬಸವರಾಜು, ಶಿವಣ್ಣ, ನಾರಾಯಣಗೌಡ, ಚಂದ್ರಾಮಣ್ಣ, ಸಿದ್ದಲಿಂಗಪ್ಪ, ಮುನಿರಾಜು, ಸುಬ್ರಮಣಿ, ಸೇರಿದಂತೆ ಹೊಸಹಳ್ಳಿ, ಆರೂಢಿ ಗ್ರಾಮದ ಮುಖಂಡರು ಇದ್ದರು. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!