ದೊಡ್ಡಬಳ್ಳಾಪುರ, (ಡಿ.01): ಶ್ರೀ ರಾಮ ಹಾಸ್ಪಿಟಲ್ ವತಿಯಿಂದ ನಗರದ ಅರವಿಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ರಾಮ ಆಸ್ಪತ್ರೆಯ ನಿರ್ದೇಶಕರು ಆದ ಡಾ.ಹೆಚ್.ಜಿ.ವಿಜಯ್ ಕುಮಾರ್ ಮಾತನಾಡಿ, ಏಡ್ಸ್ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ನಿರ್ಣಾಯಕ, ಎನ್‌ಎಸ್‌ಎಸ್ ಸ್ವಯಂಸೇವಕರು ಶಿಬಿರಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬಹುದು. ಅವರ ಸಂವಹನ ಮತ್ತು ಅರಿವು ಏಡ್ಸ್ ಪ್ರಕರಣಗಳನ್ನು ತೀವ್ರವಾಗಿ ಕಡಿಮೆ ಮಾಡುತ್ತದೆ.

ಎಚ್ಐವಿ ಸೋಂಕು ಕಳಂಕ ಎನ್ನುವ ಮನೋಭಾವನೆಯನ್ನು ಹೋಗಲಾಡಿಸುವ ಹಾಗೂ ಎಚ್ಐವಿ ಕುರಿತಂತೆ ಜನರಲ್ಲಿ ಇರುವ ತಪ್ಪು ಕಲ್ಪನೆ, ಸೋಂಕು ಹರಡದಂತೆ ವಹಿಸಬೇಕಿರುವ ಜಾಗೃತಿ ಮೂಡಿಸುವ ಸಲುವಾಗಿಯೇ ಪ್ರತಿ ವರ್ಷ ಡಿ.1ರಂದು ವಿಶ್ವ ಏಡ್ಸ್ ದಿನಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಜನರಲ್ಲಿ ಮೂಡಿರುವ ಜಾಗೃತಿ, ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಎಚ್ಐವಿ ಸೋಂಕಿನ ಪ್ರಮಾಣವು ಈಗ ಇಳಿಮುಖವಾಗಿದೆ. ಕೋವಿಡ್ನಿಂದಾಗಿ ಎಚ್ಐವಿ ಪರೀಕ್ಷೆಗೆ ಹಿನ್ನಡೆಯಾಗಿತ್ತು. ಆದರೆ ಈಗ ಮತ್ತೆ ಪರೀಕ್ಷೆಗಳನ್ನು ನಿಯಮಿತವಾಗಿ ನಡೆಸಲಾಗುತ್ತಿದೆ ಎಂದರು.
ಈ ವೇಳೆ ನಗರಸಭೆ ಹಿರಿಯ ಸದಸ್ಯ ತ.ನಾ.ಪ್ರಭುದೇವ್ ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಬಿರ್ಲಾ ಕಂಪನಿಯ ನಿವೃತ್ತ ವ್ಯವಸ್ಥಾಪಕ ಎಂ.ಎಸ್.ಮಂಜುನಾಥ್ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
