ರೈತರು ರಾಗಿ ಬೆಳೆಗೆ ತಾಂತ್ರಿಕತೆ ಅಳವಡಿಸಿಕೊಂಡಲ್ಲಿ ಹೆಚ್ಚಿನ ಇಳುವರಿ: ಸಹಾಯಕ ಕೃಷಿ ನಿರ್ದೇಶಕಿ ಡಿ.ರಾಜೇಶ್ವರಿ

ದೊಡ್ಡಬಳ್ಳಾಪುರ, (ಡಿ.02): ರೈತರು ತಾಂತ್ರಿಕತೆಗಳ ಮಹತ್ವವನ್ನು ಅರಿತು, ರಾಗಿ ಬೆಳೆಯಲ್ಲಿ ಅಳವಡಿಸಿಕೊಂಡಲ್ಲಿ ಹೆಚ್ಚಿನ ಇಳುವರಿ ಪಡೆಯಬಹುದು ಎಂದು ಸಹಾಯಕ ಕೃಷಿ ನಿರ್ದೇಶಕಿ ಡಿ.ರಾಜೇಶ್ವರಿ ತಿಳಿಸಿದರು.

ತಾಲೂಕಿನ ತೂಬಗೆರೆ ರೈತ ಸಂಪರ್ಕ ಕೇಂದ್ರ ವತಿಯಿಂದ, ಹಾಡೋನಹಳ್ಳಿ ಗ್ರಾಮದ ರೈತ ಅಂಬರೀಶ್ ಅವರ ರಾಗಿ ಬೆಳೆಯ ತಾಕಿನಲ್ಲಿ ಆಯೋಜಿಸಿದ್ದ, ರಾಗಿ ಬೆಳೆಯಲ್ಲಿ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಗಿ ಬೆಳೆಯಲ್ಲಿ ಬಿತ್ತನೆಯಿಂದ ಕೊಯ್ಲು ಮಾಡಿ, ಸಂಸ್ಕರಣೆ ಮಾಡುವರೆಗೆ ವಿವಿಧ ತಾಂತ್ರಿಕತೆಗಳು ಅಭಿವೃದ್ಧಿಗೊಂಡಿವೆ. ರೈತರು ಸಾಮಾನ್ಯವಾಗಿ ಎಂ.ಆರ್-1, ಎಂ.ಆರ್-6 ರಾಗಿಯನ್ನು ಜೂನ್- ಜುಲೈನಲ್ಲಿ ಬಿತ್ತನೆ ಮಾಡುತ್ತಾರೆ. ಹಾಗೆಯೇ ಸೆಪ್ಟೆಂಬರ್‌  ತಿಂಗಳಿನಲ್ಲಿಯೂ ಸಹ ದೀರ್ಘಾವಧಿ ತಳಿಗಳಾದ ಎಂ.ಆರ್ ಜಾತೀಯ ರಾಗಿಯನ್ನು ಬಿತ್ತನೆ ಮಾಡಲು ಮುಂದಾಗುತ್ತಾರೆ. ಇದರಿಂದ ಬೆಳೆವಣಿಗೆ ಸರಿಯಾಗಿ ಆಗದೆ ಇಳುವರಿ ಕಡಿಮೆಯಾಗುತ್ತದೆ. ಕಟಾವಿನ ಸಮಯದಲ್ಲಿ ಮಳೆ ಸಿಲುಕಿ ರೈತರಿಗೆ ನಷ್ಟವಾಗುತ್ತದೆ. ಇದನ್ನು ತಪ್ಪಿಸಲು ಮಧ್ಯಮಾವಧಿ ತಳಿಯಾದ ಎಂ.ಎಲ್-365ನ್ನು ಆಗಸ್ಟ್ ಕೊನೆಯ ವಾರದಿಂದ, ಸೆಪ್ಟೆಂಬರ್ ಮೊದಲನೇ ವಾರದವರೆಗೆ ಬಿತ್ತನೆ ಮಾಡಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಇಳುವರಿ ಪಡೆಯಬಹುದು ಎಂದರು.

ದೂರು ನೀಡಿ: ಇದೇ ವೇಳೆ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ನಿಗದಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದು, ಪ್ರತಿ ಗಂಟೆಗೆ ದೊಡ್ಡ ಕಟಾವು ಯಂತ್ರಕ್ಕೆ ರೂ.3350 ಹಾಗೂ ಕ್ಲಾಸ್ / ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ರೂ.2700 ನಿಗದಿಯಾಗಿದ್ದು, ಹೆಚ್ಚಿನ ದರಕ್ಕೆ ಬೇಡಿಕೆ ಇಟ್ಟಲ್ಲಿ ಕೃಷಿ ಇಲಾಖೆಗೆ ದೂರು ನೀಡಬಹುದೆಂದು ತಿಳಿಸಿದರು.

ಅರ್ಕಾವತಿ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ  ನಾಗರಾಜು ಮಾತನಾಡಿ, ರೈತ ಉತ್ಪಾದಕ ಕಂಪನಿಗಳ ರಚನೆಯಿಂದ ರೈತರಿಗಾಗುವ ಅನೂಕೂಲಗಳ ಬಗ್ಗೆ ತಿಳಿಸಿದರು. ಪ್ರಸ್ತುತ ಕೃಷಿಕರಿಗೆ ರಸಗೊಬ್ಬರ, ಟಾರ್ಪಲಿನ್, ಕೀಟನಾಶಕ, ಡ್ರಿಪ್ ಪೈಪ್‍ಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತರಿಂದ ಸಾವಯವ ಪದಾರ್ಥಗಳು, ತರಕಾರಿಗಳು, ಸಿರಿಧಾನ್ಯಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದರು. 

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ:ದರ್ಶಿನಿ ಮಾತನಾಡಿ, ರೈತರು ರಾಗಿ ಬೆಳೆಯುವ ಪದ್ದತಿಗಳು, ವಿವಿಧ ತಳಿಗಳು, ಕಳೆ ನಿರ್ವಹಣೆ, ಪೀಡೆ ಮತ್ತು ಕೀಟ ನಿರ್ವಹಣೆಯ ತಾಂತ್ರಿಕತೆಗಳ ಬಗ್ಗೆ ಮಾಹಿತಿಯನ್ನು ರೈತರಿಗೆ ವಿವರಿಸಿದರು.

ಇದೇ ವೇಳೆ ಪ್ರಗತಿಪರ ರೈತ ಭಾಸ್ಕರ್ ಮಾತನಾಡಿ, ರೈತರೂ ಕೃಷಿ ಬೆಳೆಗಳಿಗೆ ರಾಸಾಯನಿಕ ಗೊಬ್ಬರಗಳನ್ನು ಬಳಸುವ ಬದಲು, ಸಾವಯವ ಗೊಬ್ಬರಗಳನ್ನು ತಾವೇ ತಯಾರಿಸಿಕೊಂಡು ಬಳಸುವ ವಿಧಾನಗಳ ಬಗ್ಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ನವಿನ್‍ಕುಮಾರ್, ತಾಂತ್ರಿಕ ಸಹಾಯಕರಾದ ಪರೂಷಿನಿ, ಮುಕುಂದ, ರಾಮಚಂದ್ರಪ್ಪ, ಹಾಡೋನಹಳ್ಳಿ ರೈತ ಉತ್ಪಾದಕ ಕಂಪನಿಯ ನಿರ್ದೇಶಕರಾದ ಅಶೋಕ್, ಭಾಸ್ಕರ್, ಶ್ರೀನಿವಾಸ್ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]