ದೊಡ್ಡಬಳ್ಳಾಪುರ: ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಗೆ ಚಾಲನೆ

ದೊಡ್ಡಬಳ್ಳಾಪುರ, (ನ.02): ಜಾಗತಿಕ ಮಟ್ಟದಲ್ಲಿ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಮತ್ತು ಅತಿ ಹೆಚ್ಚು ದೇಶಗಳಲ್ಲಿ ಜನಪ್ರಿಯವಾಗಿರುವ ಕ್ರೀಡೆಗಳಲ್ಲಿ ಫುಟ್‌ಬಾಲ್‌ಗೆ ಅಗ್ರಸ್ಥಾನವಿದೆ. ಇಂತಹ ದೈಹಿಕ ಹಾಗೂ ಮನೋಬಲ ಮಿಶ್ರಿತ ಕ್ರೀಡೆಯನ್ನು ಭಾರತದಲ್ಲಿ ಉತ್ತೇಜಿಸುವ ಅಗತ್ಯವಿದೆ ಎಂದು ವಿಟಿಯು ದೈಹಿಕ ಶಿಕ್ಷಣ ಮಾಜಿ ನಿರ್ದೇಶಕ ಡಾ.ವೈ.ಎಚ್.ರಾಜೇಶ್ ಅಭಿಪ್ರಾಯಪಟ್ಟರು.

ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ನೇತೃತ್ವದಲ್ಲಿ ಶುಕ್ರವಾರ ಆರ್‌ಎಲ್‌ಜೆಐಟಿ ಮೈದಾನದಲ್ಲಿ ಆರಂಭವಾದ 02 ದಿನಗಳ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಟಿಯು ಬೆಂಗಳೂರು ವಲಯ ಮಟ್ಟದ ಪುರುಷರ ಫುಟ್‌ಬಾಲ್ ಪಂದ್ಯವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಜಗತ್ತು ಫಿಫಾ ವಿಶ್ವಕಪ್ ಫುಟ್‌ಬಾಲ್‌ನ ಕ್ರೀಡಾ ಹಬ್ಬವನ್ನು ಸಂಭ್ರಮಿಸುತ್ತಿದೆ. ಈ ಹಂತದಲ್ಲೇ ವಿಟಿಯು ವಲಯ ಮಟ್ಟದ ಫುಟ್‌ಬಾಲ್ ಛಾಂಪಿಯನ್‌ಷಿಪ್‌ಗೆ ಚಾಲನೆ ನೀಡಿರುವುದು ವಿಶೇಷವಾಗಿದೆ. ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣವನ್ನು ಅಧ್ಯಯನ ಮಾಡುವ ಜತೆಗೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಕ್ರೀಡಾ ಚಟುವಟಿಕೆಗಳತ್ತಲೂ ಗಮನ ಹರಿಸುವುದು ಮುಖ್ಯ ಎಂದರು.

ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಟ್ರಸ್ಟ್‌ನ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಯ ಹಂಬಲದೊಂದಿಗೆ ಪಾಲ್ಗೊಳ್ಳುವಿಕೆಯ ಸಂಕಲ್ಪ ಅಗತ್ಯ. ವಿಟಿಯು ವಲಯ ಮಟ್ಟದ ಕ್ರೀಡಾ ಕೂಟ ಸೇರಿದಂತೆ ಹಲವು ಪಂದ್ಯಾವಳಿಗಳನ್ನು ನಡೆಸಲು ತಮ್ಮ ಸಂಸ್ಥೆ ಸದಾ ಅವಕಾಶ ನೀಡುತ್ತಾ ಬಂದಿದೆ ಎಂದರು.

ಪ್ರಾಂಶುಪಾಲ ಡಾ.ಎಂ.ಶ್ರೀನಿವಾಸರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಉತ್ತರ ವಲಯ ದೈಹಿಕ ಶಿಕ್ಷಣ ನಿರ್ದೇಶಕ ಎ.ವಿ.ಶ್ರೀನಿವಾಸರೆಡ್ಡಿ, ಆರ್‌ಎಲ್‌ಜೆ ಸಮೂಹ ಶಿಕ್ಷಣ ಸಂಸ್ಥೆ ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ, ಆರ್‌ಎಲ್‌ಜೆಐಟಿ ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್ ಮತ್ತಿತರರು ಪಾಲ್ಗೊಂಡಿದ್ದರು.

ನಾಳೆ ಸಮಾರೋಪ: 20 ಎಂಜಿನಿಯರಿಂಗ್ ಕಾಲೇಜುಗಳ ಫುಟ್‌ಬಾಲ್ ತಂಡಗಳು ಪಾಲ್ಗೊಂಡಿರುವ ಪಂದ್ಯಾವಳಿಯ ಲೀಗ್ ಹಂತದ ಪಂದ್ಯಾವಳಿಗಳು ಬಹುತೇಕ ಮುಕ್ತಾಯವಾಗಿದ್ದು, ಶನಿವಾರ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ. ಮಧ್ಯಾಹ್ನದ ಬಳಿಕ ಬಹುಮಾನ ವಿತರಣೆ ಹಾಗೂ ಸಮಾರೋಪ ಕಾರ್ಯಕ್ರಮ ನಡೆಯಲಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]