ಹರಿತಲೇಖನಿ ದಿನಕ್ಕೊಂದು ಕಥೆ: ಸಜ್ಜನರ ಸಹವಾಸ

ಬಹಳ ವರ್ಷಗಳ ಹಿಂದೆ ಕಾಶಿಯ ರಾಜ ಬ್ರಹ್ಮದತ್ತನಾಗಿದ್ದ. ಆತ ತಾರುಣ್ಯ­ದಲ್ಲೇ ಪಟ್ಟಕ್ಕೇರಿದವನು. ಆತ ಧರ್ಮಜ್ಞ. ಅವನಿಗೆ ಸಕಲ ವಿದ್ಯೆಗಳೂ ಕರ­ತ­ಲಾಮಲಕವಾಗಿದ್ದವು. 

ಆತನ. ಮಾತು, ನಡೆ ಅತ್ಯಂತ ನಯ. ಅವನ ಬಾಯಿಯಿಂದ ತಪ್ಪು ಮಾತುಗಳು ಬರುವುದೇ ಸಾಧ್ಯವಿರಲಿಲ್ಲ. ಅವನ ಕರುಣೆ, ನ್ಯಾಯಪರತೆ, ಜನಪ್ರೀತಿ ದಂತಕಥೆಗಳೇ ಆಗಿದ್ದವು.

ಅವನ ರಾಜ್ಯದಲ್ಲಿ ಕಳವು, ಅಪರಾಧಿಗಳೇ ಇರಲಿಲ್ಲ. ನ್ಯಾಯಾಧೀಶರಿಗೆ, ಶಿಸ್ತು­ಪಾಲನೆ ಮಾಡುವ ಸೈನಿಕರಿಗೆ ಯಾವ ಕೆಲಸವೂ ಇರಲಿಲ್ಲ. ಸಮಾಜದಲ್ಲಿ ಅತ್ಯಂತ ಶಾಂತಿ ಇತ್ತು.ಬ್ರಹ್ಮದತ್ತ ಇಷ್ಟಾದರೂ ತನ್ನಲ್ಲಿ ಯಾವುದಾದರೂ ದುರ್ಗುಣವಿದೆಯೇ ಎಂದು ಪರೀಕ್ಷಿಸಿ­ಕೊಳ್ಳುತ್ತಿದ್ದ. ಆಸ್ಥಾನದಲ್ಲಿ ಯಾರನ್ನು ಕೇಳಿದರೂ ಅವರು ಅವನಲ್ಲಿ ಒಂದು ಕೆಟ್ಟಗುಣವನ್ನೂ ಹೇಳಲಿಲ್ಲ. ಅವರು ಹೆದರಿಕೆಯಿಂದ ಹೇಳಿರಲಿ­ಕ್ಕಿಲ್ಲ­ವೆಂದುಕೊಂಡು ವೇಷ ಮರೆಸಿಕೊಂಡು ತನ್ನ ದೇಶದ ಹಳ್ಳಿಹಳ್ಳಿಗಳಲ್ಲಿ ಸಂಚರಿ­ಸಿದ.

ಅಲ್ಲಿಯೂ ಸಾಮಾನ್ಯರನ್ನು ಪ್ರಶ್ನಿಸಿದ. ಅವರಲ್ಲಿ ಒಬ್ಬರೂ ರಾಜನ ಒಂದು ದುರ್ಗುಣವನ್ನೂ ಹೇಳಲಿಲ್ಲ. ಬದಲಾಗಿ ಅವನನ್ನು ದೇವರೆಂದೇ ಭಾವಿಸುವು-ದಾಗಿ ಹೇಳಿದರು. ಬ್ರಹ್ಮದತ್ತ ಅಂದಿನ ಕಾಲದ ಮಹಾಜ್ಞಾನಿ ಎಂದು ಹೆಸರಾದ ವಿಷ್ಣುಗೋಪನನ್ನು ಕಂಡು ತನ್ನಲ್ಲಿ ಯಾವುದಾದರೂ ದೋಷವಿದ್ದರೆ ತಿಳಿಸಿ ಅದನ್ನು ಕಳೆದುಕೊಳ್ಳುವ ವಿಧಾನ­ವನ್ನು ಹೇಳಲು ಕೇಳಿಕೊಂಡ.

ಇದೇ ರೀತಿಯ ಪರಿಸ್ಥಿತಿ ಕೋಸಲ ದೇಶದ ರಾಜನಾದ ಮಲಿಕಸಿಂಹನಿಗೂ ಬಂದಿತ್ತು.  ಅವನನ್ನು ಜನ ದೇವರೆಂದೇ ನಂಬುತ್ತಿದ್ದರು. ಅವನ ರಾಜ್ಯದಲ್ಲೂ ಒಂದೇ ಒಂದು ಕಳವು, ಅನ್ಯಾಯದ ಪ್ರಸಂಗ­­ಗಳು ನಡೆಯುತ್ತಿರಲಿಲ್ಲ. ಅವನೂ ಕೂಡ ವಿಷ್ಣುಗೋಪನನ್ನು ಕಂಡು ತನ್ನ ದುರ್ಗುಣಗಳನ್ನು ಕಂಡು ಹಿಡಿಯಲು ಬೇಡಿಕೊಂಡಿದ್ದ. ವಿಷ್ಣು­ಗೋಪ ಇಬ್ಬರೂ ರಾಜರ ವಿವರಗಳನ್ನೆಲ್ಲ ತರಿಸಿಕೊಂಡ. ಆಶ್ಚರ್ಯವೆಂದರೆ ಇಬ್ಬರೂ ಒಂದೇ ವಯಸ್ಸಿನವರು. ಅವರ ರಾಜ್ಯದ ವಿಸ್ತಾರ, ಐಶ್ವರ್ಯ, ಸೈನ್ಯದ ಶಕ್ತಿ, ಅವರು ಪಡೆದ  ಯಶಸ್ಸು ಎಲ್ಲವೂ ಸಮನಾಗಿಯೇ ಇದ್ದವು. ಎರಡೂ ದೇಶದ ಜನರು ತಮ್ಮ ತಮ್ಮ ರಾಜನಲ್ಲಿ ಒಂದೇ ಒಂದು ತಪ್ಪನ್ನು ಕಂಡುಹಿಡಿ­ಯಲು ಅಸಮರ್ಥ­ರಾಗಿದ್ದರು. ಇಬ್ಬ­ರಲ್ಲಿ ಯಾರು ಹೆಚ್ಚು ಒಳ್ಳೆಯವರು ಎಂಬು­ದನ್ನು ಗುರುತಿಸುವುದು ಹೇಗೆ ಎಂಬುದು ವಿಷ್ಣುಗೋಪನಿಗೆ ಸವಾಲಾ­ಯಿತು.

ಆಗ ಒಂದು ದಿನ ಯೋಚನೆ ಮಾಡಿ ಇಬ್ಬರೂ ರಾಜರ ರಥಗಳನ್ನು ಒಂದೆಡೆಗೆ ಕಳುಹಿಸುವಂತೆ ಸೂಚನೆ ನೀಡಿದ. ರಾಜರ ಸಾರಥಿಗಳು ತಮ್ಮ ರಥಗಳನ್ನು ತೆಗೆದುಕೊಂಡು ತಿಳಿಸಿದ ಸ್ಥಳಕ್ಕೆ ಹೊರಟರು. ಅವರಿಬ್ಬರ ರಥಗಳೂ ಒಂದು ಇಕ್ಕಟ್ಟಾದ ಸೇತುವೆಯ ಮೇಲೆ ಬರುವಂತೆ ವಿಷ್ಣುಗೋಪ ನೋಡಿ­ಕೊಂಡ. ಸೇತುವೆಯ ಮಧ್ಯದಲ್ಲಿ ಎರಡೂ ರಥಗಳು ಮುಖಾಮುಖಿ­ಯಾಗಿ ನಿಂತವು. ಈಗ ಯಾವು­ದಾದರೂ ಒಂದು ರಥ ಹಿಂದೆ ಹೋಗದೇ ಗತಿಯಲ್ಲ..! ಆದರೆ ಹಿಂದೆ ಹೋಗು­ವವರು ಯಾರು? ವಿಷ್ಣುಗೋಪ ಇಬ್ಬರೂ ಸಾರಥಿಗಳ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ. ಸ್ವಲ್ಪ ಸಮಯದ ಮೇಲೆ ಬ್ರಹ್ಮದತ್ತನ ಸಾರಥಿ ರಥವನ್ನು ಹಿಂದೆ ತೆಗೆದುಕೊಂಡು ಹೋದ.

ಮಲಿಕಸಿಂಹನ ಸಾರಥಿ ಸಂತೋಷದಿಂದ ರಥ ಓಡಿಸಿಕೊಂಡು ನಡೆದ. ನಂತರ ವಿಷ್ಣುಗೋಪ ಇಬ್ಬರೂ ರಾಜರನ್ನು ಒಟ್ಟಿಗೇ ಕರೆದು ಹೇಳಿದ, ‘ನೀವಿಬ್ಬರೂ ಒಳ್ಳೆಯ ರಾಜರೇ, ಅಸಾಮಾನ್ಯ ಗುಣಗಳನ್ನು ಹೊಂದಿದ್ದೀರಿ. ಆದರೆ, ಮಲಿಕಸಿಂಹನಿಗೆ ಇನ್ನೂ ಸ್ವಲ್ಪ ದರ್ಪ, ಅಹಂಕಾರವಿದೆ. ಅದು ಕರಗಬೇಕು. ಯಾಕೆಂದರೆ ನಿಮ್ಮ ಸಾರಥಿ ಆ ದರ್ಪ­ವನ್ನು ತೋರಿಸಿದ. ಆದರೆ ಬ್ರಹ್ಮದತ್ತನ ಸಾರಥಿ ನಗು ಮುಖದಿಂದ ರಥವನ್ನು ಹಿಂದೆ ತೆಗೆದ.  ಯಜಮಾನನ ದರ್ಪ ಸೇವಕನಿಗೂ ತಟ್ಟುತ್ತದೆ’ ಮಲಿಕಸಿಂಹ ಈ ಮಾತು ಒಪ್ಪಿದ ಹಾಗೂ ಇನ್ನೂ ವಿನಯಶೀಲನಾಗಲು ಪ್ರಯತ್ನಿಸಿ ಯಶಸ್ವಿ­ಯಾದ.

ಯಜ-ಮಾನನ ಗುಣ, ದುರ್ಗುಣಗಳು ಅವನ ಹಿಂಬಾಲಕರಿಗೂ ಅಂಟಿಕೊಳ್ಳುತ್ತವೆ.  ಮೌಲ್ಯಗಳು ಮೇಲಿ­ನಿಂದ ಕೆಳಕ್ಕೆ ಇಳಿಯುತ್ತವೆ. ಯಜಮಾನ ಹೇಗಿದ್ದಾನೆ ಎಂದು ತಿಳಿಯಲು ಅವನನ್ನೇ ನೋಡಬೇಕಿಲ್ಲ, ಅವನೊಂದಿಗೇ ಇರುವ ಸಹಚರರನ್ನು ಗಮನಿಸಿದರೆ ಸಾಕು. ಸಜ್ಜನ­ನಾದ ಯಜಮಾನ ತನ್ನೊಂದಿಗೆ ಇರುವವರನ್ನೂ ಸಜ್ಜನರನ್ನಾಗಿ ಮಾಡು­ತ್ತಾನೆ.                     

ಪೋಟೋ ಕೃಪೆ: ಸಾಮಾಜಿಕ ಜಾಲತಾಣ. ಸಂಗ್ರಹ ವರದಿ: ನರಸಿಂಹಮೂರ್ತಿ ಬರಗೂರು                                      

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!