ದೊಡ್ಡಬಳ್ಳಾಪುರ, (ಡಿ.03): ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ಚನ್ನಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚಿರತೆಯ ಹಾವಳಿ ಮಿತಿ ಮೀರಿದೆ. ಇದರಿಂದ ಈ ಗ್ರಾಮಗಳ ರೈತರು ತೋಟಗಳ ಕಡೆಗೆ ಹೋಗಲು ಹಾಗೂ ಬೆಟ್ಟದ ತಪ್ಪಲಿನಲ್ಲಿ ಹಸು, ಕುರಿ, ಮೇಕೆಗಳನ್ನು ಮೇಯಿಸುವುದಕ್ಕೆ ಹೋಗಲು ಭಯಪಡುವಂತಾಗಿದೆ.
ಮೂರು ದಿನಗಳ ಹಿಂದೆಯಷ್ಟೇ ಚನ್ನಾಪುರ ಗ್ರಾಮದ ಅಂಚಿನ ಕುರಿ ದೊಡ್ಡಿಗೆ ನುಗ್ಗಿದ್ದ ಚಿರತೆ ಕುರಿಯನ್ನು ತಿಂದು ಹೋಗಿತ್ತು. ಇದರಿಂದಾಗಿ ಗ್ರಾಮದಲ್ಲಿ ಸಂಜೆ ವೇಳೆ ಜನರು ಹೊರಗೆ ಬರಲು ಸಹ ಆತಂಕಪಡುವಂತಾಗಿದೆ.
ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ವತಿಯಿಂದ ಚನ್ನಾಪುರ ಸಮೀಪದ ನಂದಿಬೆಟ್ಟದ ತಪ್ಪಲಿನ ನೀಲಗಿರಿ ತೋಪಿನಲ್ಲಿ ಚಿರತೆ ಸೆರೆಹಿಡಿಯಲು ಬೋನು ಅಳವಡಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

