ಬೆಂಗಳೂರು, (ಡಿ,05): 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿವೆ ಎಂದಿದ್ದಾರೆ.

ಉಳಿದಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ ತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.
ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ.
ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ.
ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ.
ದಿನಾಂಕ 08-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ.
ದಿನಾಂಕ 10-04-2023, ಸೋಮವಾರ – ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.
ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್.
ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ. ( ಸಾಮಾಜಿಕ ಜಾಲತಾಣದಲ್ಲಿನ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
