ದೊಡ್ಡಬಳ್ಳಾಪುರ: ಮಚ್ಚೇನಹಳ್ಳಿಯಲ್ಲಿ ಕ್ಷೇತ್ರೋತ್ಸವ, ವಿಶ್ವ ಮಣ್ಣು ಅರೋಗ್ಯ ದಿನಾಚರಣೆ

ದೊಡ್ಡಬಳ್ಳಾಪುರ, (ಡಿ.05): ರೈತರು ನೂತನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಬೆಳೆಗಳನ್ನು ಬೆಳೆದರೆ ಹೆಚ್ಚಿನ ಇಳುವರಿ ಪಡೆಯಬಹುದೆಂದು ಸಾಸಲು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜಿ.ಆರ್.ಕಸ್ತೂರಯ್ಯ ತಿಳಿಸಿದರು.

ತಾಲೂಕಿನ ಸಾಸಲು ಹೋಬಳಿಯ ಮಚ್ಚೇನಹಳ್ಳಿ ಗ್ರಾಮದ ರೈತ ಮುತ್ತರಾಯಪ್ಪ ಅವರ ಜಮೀನಿನಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ, ರಾಷ್ಟ್ರೀಯ ಆಹಾರ ಭದ್ರತಾ ಯೊಜನೆಯಡಿ ಆಯೋಜಿಸಿದ್ದ ಕ್ಷೇತ್ರೋತ್ಸವ ಹಾಗೂ ವಿಶ್ವ ಮಣ್ಣು ಅರೋಗ್ಯ ದಿನಾಚರಣೆ  ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಗಿ ಬೆಳೆಯನ್ನು ಸಾಮಾನ್ಯವಾಗಿ ಜೂನ್ ಜುಲೈ ತಿಂಗಳಲ್ಲಿ ದೀರ್ಘವದಿ ತಳಿಗಳಾದ ಎಂ ಆರ್ 1 ಮತ್ತು ಎಂ ಆರ್ 6ನ್ನು ಬಿತ್ತನೆ ಮಾಡಬಹುದು ಹಾಗೂ ಅಲ್ಪಾವದಿ ತಳಿಗಳಾದ ಜಿಪಿಯು 28ಮತ್ತು ಎಂ ಲ್ 365 ನ್ನು ಆಗಸ್ಟ್ ಕೊನೆಯವಾರದವರೆಗೂ ಬಿತ್ತನೆ ಮಾಡಬಹುದು ಹಾಗೂ ಚಳಿಗಾಲದಲ್ಲೂ ಉತ್ತಮ ತಳಿಗಳನ್ನು ಬಿತ್ತನೆಕೂರಿಗೆ ಬಿತ್ತನೆ  ಮಾಡುವುದರ ಮೂಲಕ ಬೆಳೆದು ಅಧಿಕ ಇಳುವರಿ ಪಡೆಯಬಹುದು ಹಾಗೆಯೇ ರೈತರು ಬೆಳೆ ಬೆಳೆಯುವ ಪದ್ಧತಿ ಕಳೆ ನಿರ್ವಹಣೆ ಪೀಡೆನಾಶಕಗಳ ನಿರ್ವಹಣೆ ಯ ಬಗ್ಗೆ ಹಾಗೂ ಕಟಾವಿನ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.

ಮಣ್ಣು ಅರೋಗ್ಯ ದಿನಾಚರಣೆ ಕುರಿತಂತೆ ಮಾತನಾಡಿದ ಕೃಷಿ ಇಲಾಖೆ  ಸಹಾಯಕ ತಾಂತ್ರಿಕ ವ್ಯವಸ್ಥಾಪಕ ದಶರಥ್, ಮಣ್ಣಿನ ಮಹತ್ವ ಮತ್ತು ರೈತರು ಪ್ರತಿ ಎರಡು ವರ್ಷಕ್ಕೊಮ್ಮೆ ಜಮೀನಿನಲ್ಲಿ ಮಣ್ಣಿನ ಪರೀಕ್ಷೆಯನ್ನು ಮಾಡಿಸುವುದರಿಂದ ರೈತರು ಮಣ್ಣಿನಲ್ಲಿ ಯಾವ ಕೊರತೆ ಉಂಟಾಗಿದೆ ಎಂದು ತಿಳಿಯಬಹುದಾಗಿದೆ. ಅಲ್ಲದೆ ಯಾವ ಬೆಳೆ ಬೆಳೆಯಲು ಸೂಕ್ತ ಎಂಬ ವಿಚಾರ ತಿಳಿಯಬಹುದು ಎಂದರು.

ಪಶು ಇಲಾಖೆಯ ವೈದ್ಯರಾದ ಡಾ.ತಿರುಮಲ ಮಾತನಾಡಿ, ಹಸುವಿಗೆ ಕಾಲು ಬಾಯಿ ರೋಗದ ಹತೋಟಿ ಹಾಗೂ ಇತ್ತೀಚೆಗೆ ಚರ್ಮಗಂಟು ರೋಗವು ಹೆಚ್ಚಾಗುತ್ತಿದ್ದು ರೈತರು ಮುಂಜಾಗ್ರತೆಯನ್ನು ವಹಿಸುವಂತೆ ಹಾಗೂ ರೋಗ ತಡೆಗಟ್ಟಲು ಲಸಿಕೆಯನ್ನು ಹಾಕಿಸಬೇಕೆಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕೃಷಿಕ ಸಮಾಜದ ನಿರ್ದೇಶಕರಾದ ಅಶ್ವಥನಾರಾಯಣ್, ಗ್ರಾಮಪಂಚಾಯಿತಿ ಸದಸ್ಯ ಕ್ರಷ್ಣಪ್ಪ, ಸ್ಥಳೀಯ ರೈತ ಮುಖಂಡ ಶಿವಣ್ಣ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]