ಬೆಂಗಳೂರು, (ಡಿ.05): ಕಾಂಗ್ರೆಸ್‌ನ ಸಿದ್ರಾಮುಲ್ಲಾ ಖಾನ್ (ಸಿದ್ದರಾಮಯ್ಯ) ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತವೆ’ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ, ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದ್ದು, ಪರ ಮತ್ತು ವಿರುದ್ಧದ ಮಾತುಗಳು ತೀವ್ರವಾಗಿದೆ.

ಇದರ ನಡುವೆ ಉರಿಯುವ ಬೆಂಕಿ ತುಪ್ಪ ಸುರಿಯುವಂತೆ ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಬಿಜೆಪಿ ಟ್ವಿಟ್ ಮಾಡಿದೆ.

ಕನ್ನಡಿಗರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?
ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯ ಅವರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು ಮತ್ತು ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ.
ಕ್ಷಣವೂ ವಿವೇಚಿಸದೆ ತಲಾಖ್ ಎಂದು ಮಹಿಳೆಯರ ಬದುಕು ಬರ್ಬಾದ್ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಸಮಾಜವನ್ನು ಸಂಪೂರ್ಣವಾಗಿ ನೋಡದೆ, ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್ ಎನ್ನದೆ ಮತ್ತೇನೆಂದು ಕರೆದಾರು?
ದೇಶದಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.
ಟಿಪ್ಪು ಎಕ್ಸ್‌ಪ್ರೆಸ್ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’ ಎಕ್ಸ್‌ಪ್ರೆಸ್ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ ಸಿದ್ದರಾಮಯ್ಯ ಅವರೇ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?
ನಮ್ಮ ದೇಶದ ಹೆಮ್ಮೆಯ ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸೀಕತೆಯಲ್ಲಿರುವ ಕಾರಣಕ್ಕೆ ಜನರೇ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎಂದು ಬ್ರಾಂಡ್ ಮಾಡಿರುವುದು.
26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್‌ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ?
ಹಿಜಾಬ್ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ ಸಿದ್ದರಾಮಯ್ಯ.
ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
