ದೊಡ್ಡಬಳ್ಳಾಪುರ, (ಡಿ.06): ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಗೈರಾದ ಹಿನ್ನಲೆಯಲ್ಲಿ, ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಇಂದು (ಡಿ.06) ಆರೋಗ್ಯ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು, ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಹಿನ್ನಲೆಯಲ್ಲಿ ಅಧಿಕಾರಿಗಳು ಕಾರ್ಯಕ್ರಮದ ಆಯೋಜನೆ ಪೂರ್ಣಗೊಳಿಸಿದ್ದು, ಬೆಳಗ್ಗೆ 11 ಗಂಟೆಗೆ ಆರಂಭವಾಗಬೇಕಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಆದಿಯಾಗಿ ಉಪವಿಭಾಗಾಧಿಕಾರಿ ತೇಜಸ್ ಕುಮಾರ್, ತಹಶೀಲ್ದಾರ್ ಮೋಹನಕುಮಾರಿ, ಇಒ ಶ್ರೀನಾಥ್ ಗೌಡ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ನಾಗರಿಕರು ಸಚಿವರಿಗಾಗಿ ಕಾದು ಕುಳಿತಿದ್ದರು.
ಆದರೆ ಮಧ್ಯಾಹ್ನ 1.30ರ ವೇಳೆಗೆ ಜನತಾದರ್ಶನ ಕಾರ್ಯಕ್ರಮ ಮುಂದೂಡಿರುವುದಾಗಿ ಪ್ರಕಟಣೆ ಹೊರಬಿದ್ದಿದ್ದು, ಅಹವಾಲು ಸಲ್ಲಿಸಲು ಬಂದಿದ್ದ ನಾಗರಿಕರು ನಿರಾಸೆಗೆ ಒಳಗಾದರು.
ಈ ಹಿನ್ನಲೆಯಲ್ಲಿ ಅಧಿಕಾರಿಗಳ ಮನವಿಯ ಮೇರೆಗೆ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಜನತಾ ದರ್ಶನ ಆರಂಭವಾಗಿದ್ದು, ಸ್ವೀಕರಿಸಲಾದ ಅಹವಾಲುಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಶಾಸಕ ಟಿ.ವೆಂಕಟರಮಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
-->
