ದೊಡ್ಡಬಳ್ಳಾಪುರ, (ಡಿ.06): ಆರೋಗ್ಯ ಕುಟುಂಬ ಕಲ್ಯಾಣ,ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು, ಡಿಸೆಂಬರ್ 6 ಮಂಗಳವಾರ ದೊಡ್ಡಬಳ್ಳಾಪುರದಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬೆಳಿಗ್ಗೆ 11 ಗಂಟೆಯಿಂದ ದೊಡ್ಡಬಳ್ಳಾಪುರ ನಗರದ ತಾಲೂಕು ಪಂಚಾಯತ್ ಆವರಣದಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವರು.
ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಆರ್.ಲತಾ, ತಹಶೀಲ್ದಾರ್ ಮೋಹನಕುಮಾರಿ, ಇಒ ಶ್ರೀನಾಥ್ ಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

