ಕಾಂಗ್ರೆಸ್ ಸೇರುವ ‌ನಿರ್ಣಯ ಮಾಡಿಲ್ಲ: ಮಾಜಿ ಶಾಸಕ ಜೆ.ನರಸಿಂಹಸ್ವಾಮಿ

ದೊಡ್ಡಬಳ್ಳಾಪುರ, (ಡಿ.06): ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ರಾಜಕೀಯ ಪಕ್ಷಗಳು ತಾಲೂಕಿನಲ್ಲಿ ಸಕ್ರಿಯವಾಗಿದ್ದು, ಪಕ್ಷ ಸಂಘಟಿಸಲು, ಮತದಾರರನ್ನು ಸೆಳೆಯಲು ತಮ್ಮದೇ ಆದ ಕಸರತ್ತುಗಳನ್ನು‌ ಮಾಡುತ್ತಿವೆ.

ಈ ಬೆನ್ನಲ್ಲೇ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರು, ಮತ್ತೆ ಗೂಡಿಗೆ ಎಂಬಂತೆ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ತಾಲೂಕಿನಾಧ್ಯಂತ ಸಂಚಲನ ಸೃಷ್ಟಿಸಿತ್ತು. ಅಲ್ಲದೆ ಮಧುರೆ ಹೋಬಳಿ ಹಿರಿಯ ಮುಖಂಡರಾದ ಸತ್ಯನಾರಾಯಣಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷದ ವೇದಿಕೆಗಳಲ್ಲಿ ಕಂಡು ಬರುತ್ತಿರುವ ಹಿನ್ನಲೆಯಲ್ಲಿ, ನರಸಿಂಹಸ್ವಾಮಿ ಸಹ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರುತ್ತಾರೆ ಎಂಬ ವಾತಾವರಣ ಉಂಟಾಗಿತ್ತು. ಆದರೆ ನರಸಿಂಹಸ್ವಾಮಿ ಅವರು ಈ ಮಾತುಗಳನ್ನು ತಳ್ಳಿಹಾಕಿದ್ದು, ಪ್ರಸ್ತುತ ಯಾವುದೇ ನಿರ್ಣಯ ಕೈಗೊಂಡಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಇನ್ನೂ ಚುನಾವಣೆಗೆ ಸಮಯವಿದೆ. ಪ್ರಸ್ತುತ ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷಕ್ಕೆ ಸೇರುವ ಯಾವುದೇ ನಿರ್ಣಯ ಕೈಗೊಂಡಿಲ್ಲ. ಕಾದು ನೋಡುವ ಎಂದಿದ್ದಾರೆ.

ಕೆಲವೆ ತಿಂಗಳುಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜೆ.ನರಸಿಂಹಸ್ವಾಮಿ ಅವರು ಭೇಟಿಯಾಗಿದ್ದರು. ಆ ವೇಳೆ ನರಸಿಂಹಸ್ವಾಮಿ ಜೆಡಿಎಸ್ ಸೇರಲಿದ್ದಾರೆಂದು ಮಾತುಗಳು ತಾಲೂಕಿನಲ್ಲಿ ಹರಿದಾಡಿತ್ತು.

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಲಸಿಗರು ಮತ್ತೆ ಮಾತೃ ಪಕ್ಷಕ್ಕೆ ಬರಲು ಬಾಗಿಲು ತೆರಿದಿದೆ ಎಂಬ ಹೇಳಿಕೆ ಹಿನ್ನಲೆಯಲ್ಲಿ ಆಪರೇಶನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿರುವ ಆರ್.ಜಾಲಪ್ಪ ಅವರ ಪುತ್ರ ಜೆ.ನರಸಿಂಹಸ್ವಾಮಿ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವುದಕ್ಕೆ ಕಾಂಗ್ರೆಸ್‌ನ ವಲಯದಲ್ಲಿ ಭಾರಿ ಪ್ರಯತ್ನ ಆರಂಭಗೊಂಡಿದೆ. ಅಲ್ಲದೆ ಅವರೊಂದಿಗೆ ಮಾತುಕತೆ ನಡೆಸಿದ್ದು, ಮತ್ತೆ ಮಾತೃ ಪಕ್ಷಕ್ಕೆ ನರಸಿಂಹಸ್ವಾಮಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು.

ದೊಡ್ಡಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದ ನರಸಿಂಹಸ್ವಾಮಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದರು. ಮಾತ್ರವಲ್ಲ ಬಿಜೆಪಿಯಿಂದ ಸ್ಪರ್ಧಿಸಿ ಮರು ಆಯ್ಕೆಗೊಂಡಿದ್ದರು. ಅವರಿಗೆ ಕೊಳಚೆ ನಿರ್ಮೂಲನೆ ಮಂಡಳಿ ಅಧ್ಯಕ್ಷಗಿರಿಯನ್ನು ನೀಡಲಾಗಿತ್ತು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಯಡಿಯೂರಪ್ಪನವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಅವರು ನಂತರದ ಚುನಾವಣೆಯಲ್ಲಿ ಸೋತಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]