ದೊಡ್ಡಬಳ್ಳಾಪುರ, (ಡಿ.06): ಮಂಗಳವಾರ ಸಂಜೆ ಘಾಟಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮರುಳುತ್ತಿದ್ದ ಭಕ್ತರ ವಾಹನಗಳಿಗೆ ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಲಘುಮೇನಹಳ್ಳಿ ಕ್ರಾಸ್ ಬಳಿ ಚಿರತೆ ಎದುರಾಗಿದ್ದು, ಆತಂಕದ ವಾತಾವರಣ ಎದುರಾಗಿದ್ದ ಹಿನ್ನೆಲೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ರಾಜ್ಯದಲ್ಲಿ ಚಿರತೆ ಉಪಟಳದ ಆತಂಕದ ನಡುವೆಯೇ, ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಾಗುವ ರಸ್ತೆಯಲ್ಲಿ ಚಿರತೆ ಕಂಡುಬಂದಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನಲೆಯಲ್ಲಿ ಸ್ಥಳಕ್ಕೆ ನಾಲ್ಕು ಮಂದಿ ಪೊಲೀಸರು ಬಂದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕೈಗೊಂಡಿದ್ದಾರೆ.
ಲಘುಮೇನಹಳ್ಳಿ ಕ್ರಾಸ್ ಸಮೀಪ ಚಿರತೆಯೊಂದು ಎರಡು ಮರಿಗಳೊಂದಿಗೆ ರಸ್ತೆ ದಾಟಿದ್ದು, ವಾಹನ ಸವಾರರು ಆತಂಕಕ್ಕೆ ಒಳಾಗುವಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಚನ್ನಾಪುರ ಗ್ರಾಮದ ಅಂಚಿನ ಕುರಿ ದೊಡ್ಡಿಗೆ ನುಗ್ಗಿದ್ದ ಚಿರತೆ ಕುರಿಯನ್ನು ತಿಂದು ಹೋಗಿತ್ತು. ಇದರಿಂದಾಗಿ ಗ್ರಾಮದಲ್ಲಿ ಸಂಜೆ ವೇಳೆ ಜನರು ಹೊರಗೆ ಬರಲು ಸಹ ಆತಂಕಪಡುವಂತಾಗಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

