ಫೆಬ್ರವರಿಯಲ್ಲಿ ಏರ್ ಶೋ: ಪ್ರಧಾನಿ ಮೋದಿ ಉದ್ಘಾಟನೆ – ಸಿಎಂ

ಬೆಂಗಳೂರು, (ಡಿ.7): 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ‌ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ನ್ನು ಉದ್ಘಾಟಿಸಿ ಮಾತನಾಡಿದರು

ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ   ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು.

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರ: ಭಾರತದ ಎಂಜನೀಯರಗಳ ಸಾಮರ್ಥ್ಯ ಉತ್ತಮ ವಾಗಿದೆ.ಮುಂದಿನ ದಿನಗಳಲ್ಲಿ ಎಲ್ಲ ಭಾಗಗಳನ್ನೂ ಒಳಗೊಂಡ ಸಂಪೂರ್ಣ ವಿಮಾನದ ಉತ್ಪಾದನೆಯನ್ನು ಬೆಂಗಳೂರಿನಲ್ಲಿಯೇ ಆಗಬೇಕೆಂಬುದು ನನ್ನ ಕನಸಾಗಿದೆ. ಏರೊಸ್ಪೇಸ್  ಕ್ಷೇತ್ರಕ್ಕೆ ಬೆಂಗಳೂರು ಉತ್ತಮ ಸ್ಥಳವಾಗಿದ್ದು, ಇಲ್ಲಿ ಡಿಆರ್ ಡಿ ಒ, ಎನ್ ಎ ಎಲ್, ಎಚ್ ಎ ಎಲ್ ನಂತಹ ಸಂಸ್ಥೆಗಳಿವೆ.ಬೆಂಗಳೂರಿನಲ್ಲಿ ಏರೋಸ್ಪೇಸ್, ಕೃತಕ ಬುದ್ಧಿಮತ್ತೆ, ನವೀಕರಿಸಬಹುದಾದ ಇಂಧನ, ಸೆಮಿ ಕಂಡಕ್ಟರ್ ಗೆ ಸಂಬಂಧಿಸಿದ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ ಎಂದರು.

ಶ್ರಮದ ಫಲ: ಕೊಲಿನ್ಸ್ ಏರೊಸ್ಪೆಸ್ ಎಂಜನೀಯರಿಂಗ್ ಸಂಸ್ಥೆಯನ್ನು ಆರಂಭಿಸಿದ್ದು ಸಂತಸವಾಗಿದೆ. ಈ ಸಂಸ್ಥೆ ಬೆಂಗಳೂರಿನಲ್ಲಿ 25 ವರ್ಷ ಪೂರೈಸಿದೆ. ಇದು ಸಂಸ್ಥೆಯ ಸಾಧನೆಯನ್ನು ತೋರಿಸುತ್ತದೆ‌. ಈ ಸಂಸ್ಥೆ ಬೆಂಗಳೂರಿನ ಪ್ರಮುಖ ಇಂಜಿನಿಯರಿಂಗ್ ಕೇಂದ್ರವಾಗಿದೆ ಇದು ನಿಮ್ಮ ಶ್ರಮದ ಫಲ. ಬೆಂಗಳೂರು, ಕರ್ನಾಟಕ, ಭಾರತ ಹೆಮ್ಮೆ ಪಡುವಂತೆ ಸಂಸ್ಥೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಏರೋ ಸ್ಪೇಸ್ ಅತ್ಯಂತ ವಿಶೇಷ ಇದು ಮನುಷ್ಯನನ್ನು ಮತ್ತೊಂದು ಲೋಕಕ್ಕೆ ತೆಗೆದುಕೊಂಡು ಹೋಗುತ್ತದೆ. ಮನುಷ್ಯನ ಮನಸ್ಸನ್ನು ಒಂದು ಹಂತದವರೆಗೆ ವಿಸ್ತರಣೆ ಮಾಡಬಹುದು. ಮನುಷ್ಯನ ಬುದ್ದಿ ಶಕ್ತಿ ಶೇ 80 ರಷ್ಟು ಬಳಕೆಯಾಗುವುದಿಲ್ಲ. ಪರಮಹಂಸ ಅತ್ಯಂತ ಭಾರವಾದ ಮತ್ತು ಶುಭ್ರ ಪಕ್ಷಿ ಅದು ಅತಿ ಎತ್ತರದಲ್ಲಿ  ಹಾರಬಹುದು. ಅದು ಮಾನಸ ಸರೋವರದಲ್ಲಿ ಇರುತ್ತದೆ. ಅದೇ ರೀತಿ ಏರೊಸ್ಪೇಸ್ ಅತ್ಯಂತ ಎತ್ತರದಲ್ಲಿ ಹಾರಬಹುದು.

ಈ ಸಂದರ್ಭದಲ್ಲಿ ಕಾಲಿನ್ಸ್ ಸಂಸ್ಥೆಯ ಅಧ್ಯಕ್ಷ ಸ್ಟೀಫನ್ ಟಿಮ್ಸ್ , ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!