ದೊಡ್ಡಬಳ್ಳಾಪುರ, (ಡಿ.08): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯನ್ನು ರದ್ದು ಮಾಡಲಾಗಿದೆ.

ಈ ಕುರಿತಂತೆ ಅಪರ ಜಿಲ್ಲಾಧಿಕಾರಿ ವಿಜಯ ಇ.ರವಿಕುಮಾರ್ ಪ್ರಕಟಣೆ ನೀಡಿದ್ದು, ಡಿಸೆಂಬರ್ 20 ರಂದು ನಿಗದಿಯಾಗಿದ್ದ ದನಗಳ ಜಾತ್ರೆಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ.

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ಧವಾಗಿದ್ದು. ನೆರೆಯ ತಮಿಳುನಾಡು ಮತ್ತು ಆಂಧ್ರಪ್ರದೇಶದ ರೈತರು ಸಹ ಜಾತ್ರೆಗೆ ಬಂದು ದನಗಳ ವ್ಯಾಪಾರ ಮಾಡುತ್ತಾರೆ. ಆದರೆ, ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ, ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯನ್ನು ರದ್ದು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವಿಜಯ ಇ.ರವಿಕುಮಾರ್ ಹರಿತಲೇಖನಿಗೆ ಸ್ಪಷ್ಟಪಡಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
