ದೊಡ್ಡಬಳ್ಳಾಪುರ, (ಡಿ.08): ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಯಾವ ಪ್ರಭಾವವನ್ನೂ ಬೀರಲ್ಲ. ಹಾಗೆ ಯೋಚಿಸುವುದಾದರೆ ಜನತೆ ಬದಲಾವಣೆ ಬಯಸಿದ ಪಂಜಾಬ್, ಹಿಮಾಚಲ ಪ್ರದೇಶ, ದೆಹಲಿ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತದೆಯೇ ಎಂದು ಶಾಸಕ ಟಿ.ವೆಂಕಟರಮಣಯ್ಯ ಇಂದಿನ ಚುನಾವಣೆ ಫಲಿತಾಂಶದ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಗುಜರಾತ್ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಚುನಾವಣೆ ಕಾರಣ ಮೋದಿಯಂತೆ ಪ್ರಧಾನಿಯೊಬ್ಬರು ತಮ್ಮ ರಾಜ್ಯದಲ್ಲಿ ಪ್ರಚಾರ ನಡೆಸಿರುವುದು ಇತಿಹಾಸದಲ್ಲಿಯೇ ಇಲ್ಲವಾಗಿದೆ.
ಮತದಾರರಿಗೂ ಬಿಜೆಪಿ ವಿರುದ್ಧ ಬೇಸರವಿದೆ. ಅದು ಹಿಮಾಚಲ ಪ್ರದೇಶದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮತವನ್ನು ನೀಡಿರುವುದು ಸಾಕ್ಷಿಯಾಗಿದೆ.
ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್ ಚುನಾವಣಾ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರದು.
ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರೋಕೆ ಸಾಧ್ಯನಾ? ಎಂದು ಪ್ರಶ್ನಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

