ಬೆಂಗಳೂರು, (ಡಿ.08): ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು.
“ಡಬಲ್ ಎಂಜಿನ್ ಸರ್ಕಾರ” ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
