ಹರಿತಲೇಖನಿ ದಿನಕ್ಕೊಂದು ಕಥೆ: ವ್ಯಾಮೋಹ

ಇಂದಿದ್ದು ನಾಳೆ ಇಲ್ಲದಂತಾಗುವ ಈ ನಶ್ವರ ಪ್ರಪಂಚದ ಮೋಹವನ್ನು ಅಳೆದವರು ಸಂತರು, ಶರಣರು, ಮಹಂತರು. ಅವರಿಗೆ ಈ ಪ್ರಪಂಚದ ಸಿರಿ ಸಂಪದವೆಲ್ಲವೂ ಒಂದು ಹುಲ್ಲುಕಡ್ಡಿಯಂತೆ. ನಮಗಾದರೂ ಈ ಪ್ರಪಂಚವೇ ಸರ್ವಸ್ವ. ಧನಕನಕಾದಿಕಗಳಿಗಾಗಿ ನಾವು ಪ್ರಾಣ ಪಣಕ್ಕಿಟ್ಟು ಹೋರಾಡುತ್ತೇವೆ. ಅಮೂಲ್ಯವಾದ ಆಯುಷ್ಯವನ್ನು ವ್ಯರ್ಥ ಕಳೆಯುತ್ತೇವೆ. 

ಒಂದು ಗೇಣು ಭೂಮಿಗಾಗಿ ಮಹಾಭಾರತದಂಥ ಘನಘೋರ ಯುದ್ಧವೇ ನಡೆಯಿತು. ಅಣ್ಣ-ತಮ್ಮಂದಿರಾದ ಕೌರವರು, ಪಾಂಡವರು ಬದ್ಧ ವೈರಿಗಳಂತೆ ಹೋರಾಡಿ ಮಡಿದರು.

ಒಂದು ಕ್ಷಣ ರೂಪದ ಆಕರ್ಷಣೆ ಒಳಗಾಗಿ ರಾಮಾಯಣ ನಡೆದುಹೋಯಿತು. ಸುಂದರವಾದ ಲಂಕಾ ಪಟ್ಟಣ ಬೂದಿಯಾಯ್ತು. ಮಹಾ ಶಿವಭಕ್ತನಾದ ರಾವಣ ಅಸುನೀಗಿದೆ. ಅಪಾರ ಜೀವಹಾನಿ ಸಂಭವಿಸಿತು. ಇಂಥಾ ನಶ್ವರ ಸಂಪತ್ತಿನ ಮೋಹವು ಸಂತರು, ಶರಣರ ಬಳಿ ಎಂದೂ ಸುಳಿಯಲಿಲ್ಲ.

ಚೀನಾ ದೇಶದ ಸಂತ ಲಾವೋತ್ಸೆ ನಾವೆಯಲ್ಲಿ ಕುಳಿತು ನದಿ ದಾಟುತ್ತಿದ್ದ. ಅದೇ ನಾವೆಯಲ್ಲಿ ಒಬ್ಬ ಸಿರಿವಂತನಿದ್ದ. ಸಂತನನ್ನು ಕಂಡು ವಂದಿಸಿ ಚಿನ್ನದ ಸರವನ್ನು ಕಾಣಿಕೆಯಾಗಿ ಕೊಟ್ಟ. ತಕ್ಷಣ ಸಂತ ಆ ಸರವನ್ನು ನದಿಗೆ ಎಸೆದ. ಸಿರಿವಂತನು ನೀರಿಗಿಳಿದು ಅದನ್ನು ತಂದ.

‘ಸಂತರೆ ಇದು ಚಿನ್ನದ ಸರ. ಇದರ ಬೆಲೆ ಎಷ್ಟು ನಿಮಗೆ ಗೊತ್ತೇ?’ ಎಂದು ಕೇಳಿದ. ಸಂತ ಲಾವೋತ್ಸೆ ಹೇಳಿದ, ”ಅದರ ಬೆಲೆ ನಿನ್ನನ್ನು ನೀರಿಗೆ ಜಿಗಿಸುವಷ್ಟು ! ಈ ನದಿಯು ಸಾವಿರಾರು ಬಣ್ಣ ಬಣ್ಣದ ಮೀನುಗಳಿಗೆ, ಮೊಸಳೆಗಳಿಗೆ, ಅಸಂಖ್ಯ ಜಲಚರ ಪ್ರಾಣಿಗಳಿಗೆ ಆಶ್ರಯ ಕೊಟ್ಟಿದೆ. ಈ ಜೀವಂತ ಸಿರಿಯ ಎದುರು ನಿನ್ನ ಈ ನಿರ್ಜೀವ ಚಿನ್ನದ ಸರಕ್ಕೆ ಏನು ಬೆಲೆ ?,” ಸಂತರ ಈ ನುಡಿಗಳ ಕೇಳಿದಾಗ ಸಿರಿವಂತನ ಕಣ್ಣು ತೆರೆಯಿತು.

ಹಸಿವನ್ನು ಇಂಗಿಸಿಕೊಳ್ಳುವುದಕ್ಕಾಗಿ ಒಂದು ಕೋಳಿಯು ಸಿರಿವಂತರ ತಿಪ್ಪೆಯನ್ನು ಕೆದರುತ್ತಿತ್ತು. ಅಲ್ಲಿ ಆಕಸ್ಮಿಕವಾಗಿ ಅದಕ್ಕೆ ಒಂದು ರತ್ನದ ಹರಳು ದೊರೆಯಿತು. ಅದನ್ನು ನೋಡಿದ ಕೂಡಲೇ ಕೋಳಿಯು ಕಾಲಿನಿಂದ ದೂರ ಎಸೆದು ಹೇಳಿತು- ”ನೀನು ರಾಜಮಹಾರಾಜರನ್ನು ಮರಳು ಮಾಡಿರಬಹುದು. ನಿನಗಾಗಿ ಅವರು ಹೋರಾಡಿ ಪ್ರಾಣವನ್ನೂ ಕಳೆದುಕೊಂಡಿರಬಹುದು. ಆದರೆ ನಾನು ಮಾತ್ರ ನಿನಗೆ ಮರುಳಾಗಲಾರೆ. ಏಕೆಂದರೆ ನಿನ್ನಿಂದ ನನ್ನ ಹಸಿವನ್ನು ನೀಗಿಸಲು ಸಾಧ್ಯವಿಲ್ಲ,” ಇಷ್ಟು ಹೇಳಿ ಕೋಳಿಯು ಮತ್ತೆ ತಿಪ್ಪೆಯನ್ನು ಕೆದರತೊಡಗಿತು. ಆಗ ಅದಕ್ಕೆ ಒಂದು ಜೋಳದ ಕಾಳು ಸಿಕ್ಕಿತು.

ಅದನ್ನು ತೆಗೆದುಕೊಂಡು ಕಣ್ಣಿಗೆ ಒತ್ತಿಕೊಂಡು ‘ನೀನು ದೇವರಿಗೂ ದೇವರು ಅನ್ನಬ್ರಹ್ಮ, ನೀನು ಮಾತ್ರ ನನ್ನ ಹಸಿವನ್ನು ನೀಗಿಸಬಲ್ಲೆ ‘ ಎಂದು ಕಾಳನ್ನು ಸೇವಿಸಿ ಕುಣಿಯುತ್ತಾ ಹೊರಟಿತು.

ಅಷ್ಟರಲ್ಲೇ ಅಲ್ಲಿಗೆ ಬಂದ ಒಬ್ಬ ಮನುಷ್ಯ ಕೋಳಿ ಎಸೆದಿದ್ದ ರತ್ನದ ಹರಳನ್ನು ಎತ್ತಿಕೊಂಡ. ಇದನ್ನು ನೋಡಿದ ಸಿರಿವಂತರ ಮನೆಯುವರು ಬಂದು ಆತನನ್ನು ಹಿಡಿದು ಶಿಕ್ಷಿಸಿದರು. ಕೋಳಿಯಷ್ಟು ಬುದ್ಧಿ ಮಾನವರಿಗೆ ಇರುವುದಾದರೆ ರಾಮಾಯಣ, ಮಹಾಭಾರತದಂಥ ಅನಾಹುತ ನಡೆಯುತ್ತಿತ್ತೆ? ಇದಕ್ಕೆಲ್ಲ ಕಾರಣ ಮನುಷ್ಯನಲ್ಲಿರುವ ನಶ್ವರ ಸಿರಿಯ ವ್ಯಾಮೋಹ.

ಕೃಪೆ: ಶ್ರೀ ಸಿದ್ದೇಶ್ವರ ಸ್ವಾಮೀಜಿ.                        ಸಂಗ್ರಹ: ನರಸಿಂಹಮೂರ್ತಿ ಬರಗೂರು. (ಸಾಮಾಜಿಕ ಜಾಲತಾಣದಲ್ಲಿನ ಸಾಂದರ್ಭಿಕ ಚಿತ್ರ ಬಳಸಲಾಗಿದೆ )

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!