ದೊಡ್ಡಬಳ್ಳಾಪುರ: ವಂಚಕನ ಮಾತು ನಂಬಿ 70 ಗ್ರಾಂ ಚಿನ್ನದ ಸರ ಕಳೆದುಕೊಂಡ ವೃದ್ದೆ..!

ದೊಡ್ಡಬಳ್ಳಾಪುರ, (ಡಿ.09): ಬೀದಿ ಬದಿಯಲ್ಲಿನ ವ್ಯಾಪಾರ ವೃದ್ಧಿ ಮಾಡುವುದಾಗಿ ಮೋಡಿ ಮಾಡಿದ ವಂಚಕನ ಕೈಚಳಕದಿಂದ, ವೃದ್ಧೆಯೋರ್ವರು 70 ಗ್ರಾಂ ಚಿನ್ನದ ಸರವನ್ನ ಕಳೆದುಕೊಂಡು ಪರದಾಡುವ ಸ್ಥಿತಿ ಎದುರಾಗಿದೆ. 

ನಗರದ ತಿಗಳರಪೇಟೆಯ ನಿವಾಸಿ 72 ವರ್ಷದ ಜಯಮ್ಮ ವಂಚಕನ ಮೋಡಿಗೆ 70 ಗ್ರಾಂ ಚಿನ್ನದ ಸರವನ್ನ ಕಳೆದುಕೊಂಡ ವೃದ್ಧೆಯಾಗಿದ್ದಾರೆ. 40 ವರ್ಷಗಳ ಹಿಂದೆ ಆಕೆಯ ಪತಿ ಕೊಡಿಸಿದ ಚಿನ್ನದ ಸರ ಅದಾಗಿದ್ದು, ತನ್ನ ಕೊನೆಗಾಲದಲ್ಲಿ ಚಿನ್ನದ ಸರ ಆಸರೆಯಾಗುತ್ತೆ ಎಂಬ ನಂಬಿಕೆಯಲ್ಲಿದ್ದರು ಆ ವೃದ್ಧೆ, ಆದರೆ. ಆಕೆಯ ಪಾಲಿಗೆ ಆಸರೆಯಾಗಿದ್ದ ಚಿನ್ನದ ಸರ ವಂಚಕನ ಪಾಲಾಗಿ ಆಕೆಯ ಕಣ್ಣೀರಿಗೆ ಕಾರಣವಾಗಿದೆ. 

ವೃದ್ದೆ ಜಯಮ್ಮ ಅಳಿಯ ಮಗಳ ಜೊತೆ ವಾಸವಾಗಿದ್ದಾರೆ, ಅಳಿಯ ಆಸ್ಪತ್ರೆಯ ಮುಂಭಾಗದಲ್ಲಿ ತಳ್ಳುಗಾಡಿಯಲ್ಲಿ ವ್ಯಾಪಾರ ನಡೆಸುತ್ತಾರೆ, ಡಿಸೆಂಬರ್ 6ರಂದು ಅಳಿಯ ಆಸ್ಪತ್ರೆಗೆ ಹೋಗಬೇಕಿದ್ದರಿಂದ, ಅಂದು ಅಂಗಡಿಯನ್ನು ಜಯಮ್ಮ ನೋಡಿಕೊಳ್ಳುತ್ತಿದ್ದರು, ಬೆಳಗ್ಗೆ 11 ಗಂಟೆ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬ ಬಂದಿದ್ದು, ವೃದ್ದೆಯನ್ನ ಮಾತನಾಡಿಸುತ್ತಾ ವ್ಯಾಪಾರ ಹೇಗಿದೆ ಎಂದು ಕೇಳಿದ್ದಾನೆ, ವ್ಯಾಪಾರ ಅಷ್ಟಕಷ್ಟೇ ಎಂದು ಬೇಸರದಿಂದ ಹೇಳಿದ್ದಾರೆ ವೃದ್ದೆ, ನಿಮ್ಮ ವ್ಯಾಪಾರ ವೃದ್ಧಿ ಮಾಡಿವುದ್ದಾಗಿ ಹೇಳಿದ ಆತ ಕುಂಕುಮ ಕೊಡಿ ಎಂದಿದ್ದಾನೆ, ಪೇಪರ್ ನಲ್ಲಿ ಕುಂಕುಮ ಇಟ್ಟು ಇದರೊಳಗೆ ಚಿನ್ನದ ಸರ ಇಡುವಂತೆ ಹೇಳಿದ್ದಾನೆ, ಆತನ ಮಾತಿನ ಮೋಡಿಗೆ ಒಳಗಾದ ವೃದ್ದೆ ಪೊಟ್ಟಣದಲ್ಲಿ ಚಿನ್ನದ ಸರ ಇಟ್ಟಿದ್ದಾರೆ, ಆತನೇ ಪೊಟ್ಟಣವನ್ನ ಸೆರಗಿನಲ್ಲಿ ಕಟ್ಟಿ ವೃದ್ಧೆಯ ಸೊಂಟದ ಬಳಿ ಇಟ್ಟು ಅಲ್ಲಿಂದ ತೆರಳಿದ್ದಾನೆ, ಅವನು ಹೇಳಿದಂತೆ ಸ್ವಲ್ಪ ಸಮಯದ ನಂತರ ಸೆರಗನ್ನು ಬಿಚ್ಚಿ ನೋಡಿದ್ದಾಗ ಚಿನ್ನದ ಸರದ ಬದಲಿಗೆ ಕಲ್ಲು ಪತ್ತೆಯಾಗಿದೆ, ವಂಚಕ ತನ್ನ ಕೈಚಳಕದಿಂದ ಚಿನ್ನದ ಸರ ಇಡುವ ಬದಲಿಗೆ ಕಲ್ಲನ್ನಿಟ್ಟು ಪರಾರಿಯಾಗಿದ್ದು, ವೃದ್ಧೆ ಪರದಾಡುವಂತಾಗಿದೆ.

ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!