
ಬೆಂಗಳೂರು, (ಡಿ.09): ಮಾಂಡಸ್ ಚಂಡಮಾರುತ ಪರಿಣಾಮ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ಥಂಡಿ ಅನುಭವವಾಗುತ್ತಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.10 ರಿಂದ 14ರವರೆಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಶುಕ್ರವಾರ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ತುಂತುರು ಮಳೆಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
