ಹರಿತಲೇಖನಿ ದಿನದ ಚಿತ್ರ: ಕುಂಭಾಸಿ

ಸಿದ್ದಿ ಕ್ಷೇತ್ರ ಎಂದೇ ಪ್ರಖ್ಯಾತಿ ಪಡೆದಿರುವ ಕುಂಭಾಸಿ, ಕುಂದಾಪುರದಲ್ಲಿನ ಪ್ರಸಿದ್ಧ ದೇವಾಲಯಗಳಲ್ಲೊಂದು. ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲಿ ಇದೂ ಒಂದಾಗಿದೆ. ಕುಂದಾಪುರದಿಂದ ದಕ್ಷಿಣಕ್ಕೆ ರಾ.ಹೆ. 66ರಲ್ಲಿ ಸುಮಾರು 9 ಕಿ.ಮೀ. ದೂರದಲ್ಲಿ ಸಾಗಿದರೆ ಆನೆಗುಡ್ಡೆ (ಕುಂಭಾಸಿ) ಶ್ರೀ ವಿನಾಯಕ ದೇವರ ದರ್ಶನ ಪಡೆಬಹುದಾಗಿದೆ. ಇದು ಪುರಾತನವಾದ ಮತ್ತು ನಾಡಿನಾದ್ಯಂತ ಭಕ್ರಸಾಗರವನ್ನು ಹೊಂದಿರುವ ದೇವಾಲಯವಾಗಿದೆ.

ಪೌರಾಣಿಕ ಹಿನ್ನಲೆ: ಕುಂಭಾಸಿಗೆ ಹರಿಹರಕ್ಷೇತ್ರ, ಮಧುಕಾನನ, ಗೌತಮಕ್ಷೇತ್ರ, ನಾಗಾಚಲ, ಆನೆಗುಡ್ಡೆ, ಕುಂಭಕಾಶಿ ಮುಂತಾದ ಹೆಸರುಗಳಿವೆ. ಪ್ರತಿ ಹೆಸರಿನ ಹಿಂದೆಯೂ ಪೌರಾಣಿಕ ಕಥೆಗಳಿವೆ.

ಹಿಂದೆ ಮಹಾತೇಜಸ್ವಿಯಾದ ಕುಂಭಾಸುರನೆಂಬ ರಾಕ್ಷಸನು ರಾಮಚಂದ್ರನಿಗೆ ಭಯಪಟ್ಟು ಮಹೇಂದ್ರಗಿರಿಯಲ್ಲಿ ಅವಿತುಕೊಂಡಿದ್ದನು. ಕಾಲಾಂತರದಲ್ಲಿ ಅಲ್ಲಿಂದ ಹೊರಟು ನಾರದನ ಮಾತಿನಂತೆ ಈಶ್ವರನನ್ನು ಮೆಚ್ಚಿಸಿ ವರಪಡೆದು ಮದೋನ್ಮತ್ತನಾಗಿ ಶ್ರೀ ಕ್ಷೇತ್ರಕ್ಕೆ ಬಂದು ಸಿಕ್ಕಿದ ಜನರನ್ನೆಲ್ಲ ದಂಡಿಸಿ ಸೇನಾಸಮೇತನಾಗಿ ರಾಜ್ಯ ಸ್ಥಾಪನೆ ಮಾಡಿ ರಾಜ್ಯಭಾರ ನಡೆಸತೊಡಗಿದನು. ಈತನಿಗೆ ಭಯಪಟ್ಟು ಅಲ್ಲಿನ ಜನರು ಓಡಿಗೋಗಬೇಕಾಗಿ ಬಂತು..

ಆ ಸಮಯ ಪಾಂಡವರು ದ್ರೌಪದಿ ಸಹಿತ ವನವಾಸಿಗಳಾಗಿ ತೀರ್ಥಯಾತ್ರೆ ಮಾಡುತ್ತಾ ತುಂಗಭದ್ರಾ ತೀರದಲ್ಲಿರುವುದನ್ನು ತಿಳಿದ ಗೌತಮಾದಿ ಮುನಿಗಳು ಅಲ್ಲಿಗೆ ಹೋಗಿ ತಮ್ಮ ಸಂಕಷ್ಟವನ್ನು ಪಾಂಡವರಲ್ಲಿ ತೊಡಿಕೊಂದರು. ಪರಿಸ್ಥಿತಿಯನ್ನರಿತ ಧರ್ಮರಾಯನು ಸೋದರರೊಡನೆ ಕೂಡಿಕೊಂಡು ಭಾರ್ಗವ ಕ್ಷೇತ್ರವನ್ನು ಸೇರಿ ಮಧುವನಕ್ಕೆ ಬಂದು ಕ್ಷೇತ್ರದ ದರ್ಶನ ಮಾಡಿದನು.

ಸ್ವಲ್ಪ ದಿನಗಳಲ್ಲಿ ನಾಗಾಚಲಕ್ಕೆ ಬಂದು ಗಣೇಶನನ್ನು ಅರ್ಚಿಸಿ ಭೀಮಾದಿಗಳನ್ನು ರಾಕ್ಷಸರ ಸಂಹಾರಕ್ಕೆ ಕಳುಹಿಸಿಕೊಟ್ಟನು. ಭೀಮಾದಿಗಳು ಶಂಖನಾದ ಮಾಡುತ್ತಾ ಮುಂದುವರೆಯಲು ಕುಂಭಾಸುರನು ಯುದ್ಧಕ್ಕೆ ಬಂದನು. ಭೀಮನಿಗೂ ಕುಂಭಾಸುರನಿಗೂ ಭಯಂಕರ ಗದಾಯುದ್ಧ ನಡೆಯಿತು. ಅದರಲ್ಲಿ ರಾಕ್ಷಸನೇ ಜಯಶಾಲಿಯಾಗುವಂತಿದ್ದಾಗ ಅಶರೀರವಾಣಿಯೊಂದುಂಟಾಯಿತು. ಕೂಡಲೇ ಭೀಮನು ಗಣೇಶನನ್ನು ಮನದಲ್ಲೇ ಸ್ಮರಿಸಿ, ಪ್ರಸಾದ ರೂಪವಾದ ಖಡ್ಗವನ್ನು ಧರಿಸಿ ಕುಂಭಾಸುರನನ್ನು ಸಂಹಾರ ಮಾಡಿ ಮತ್ತುಳಿದ ರಾಕ್ಷಸರನ್ನು ನಿರ್ನಾಮಗೊಳಿಸಿದನು. ಶರೀರವಾಣಿಯಂತೆ ಖಡ್ಗದ ಶಕ್ತಿಯಿಂದ ಅಸುರನ್ನು ಸಂಹಾರ ಮಾಡಿದ್ದರಿಂದ ಈ ಕ್ಷೇತ್ರ ಕುಂಭ+ಅಸಿ(ಖಡ್ಗ)= ಕುಂಭಾಸಿ ಎಂದು ಸುಪ್ರಸಿದ್ಧವಾಯಿತು.

ಈ ದೇವಾಲಯವು ಅತೀ ಪುರಾತನವಾಗಿದ್ದು, ಅಲ್ಲಿಯೇ ಹತ್ತಿರದಲ್ಲಿ ನಾಗಾಚಲ ಅಯ್ಯಪ್ಪ ಸ್ವಾಮಿ ದೇವಾಲಯ ಹಾಗೂ ಇತರ ದೇವಾಲಯಗಳಿವೆ. ವಿನಾಯಕನ ಸನ್ನಿದಾನದಲ್ಲಿ ಪ್ರತಿನಿತ್ಯ ಅನ್ನದಾನ ಸೇವೆ ನಡೆಯುತ್ತದೆ‌.

ಪೂಜಾ ವಿನಿಯೋಗಾದಿಗಳು: ದೇವಾಲಯದಲ್ಲಿ ಬೆಳಿಗ್ಗೆ 5 ಘಂಟೆಗೆ, ಮಧ್ಯಾಹ್ನ 1.00 ಘಂಟೆಗೆ, ರಾತ್ರಿ 8.30 ಕ್ಕೆ ತ್ರಿಕಾಲದಲ್ಲಿ ಪೂಜೆ ನಡೆಯುತ್ತದೆ. ಬೆಳಿಗ್ಗೆ 6 ರಿಂದ ರಾತ್ರಿ 9 ರ ತನಕ ಅವಿರತವಾಗಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ದೇವಾಲಯ ಮುಕ್ತವಾಗಿರಯತ್ತದೆ. ವಾರದಲ್ಲಿ ಆದಿತ್ಯವಾರ, ಮಂಗಳವಾರ, ಶುಕ್ರವಾರ ಹಾಗೂ ಸಂಕ್ರಮಣ, ಸಂಕಷ್ಟಹರ ಚತುರ್ಥಿ ಹಾಗೂ ಗಣೇಶ ಚೌತಿ ದಿನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುತ್ತಾರೆ. ಮಾರ್ಗಶಿರ ಶುದ್ದ ಚತುರ್ಥಿ ವಾರ್ಷಿಕ ರಥೋತ್ಸವ ನಡೆಯುತ್ತದೆ. ವರ್ಷದಲ್ಲಿ 8-10 ಸಹಸ್ರ ನಾಳಿಕೇರ ಗಣಯಾಗ ನಡೆಯುತ್ತದೆ. ಇಲ್ಲಿಯ ಸೇವೆಗಳಲ್ಲಿ ಸತ್ಯಗಣಪತಿ ವೃತ, ಗಣಹೋಮ, ರಂಗಪೂಜೆ ವಿಶೇಷವಾಗಿ ನಡೆಯುತ್ತದೆ. ಸತ್ಯಗಣಪತಿ ವೃತವನ್ನು ಇಷ್ಟಾರ್ಥ ಸಿದ್ದಿಗಾಗಿ ಈ ಪೂಜೆಯನ್ನು ಮಾಡಿಸುತ್ತಾರೆ.

ದೇವಸ್ಥಾನದ ವಿಳಾಸ: ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ, ಕುಂಭಾಸಿ, ಕುಂದಾಪುರ – ತಾಲೂಕು. ಉಡುಪಿ- ಜಿಲ್ಲೆ, ಕರ್ನಾಟಕ. ದೂರವಾಣಿ: 08254-26107908254-27222

ಮಾರ್ಗ: ಉಡುಪಿ ಕುಂದಾಪುರ ಮಧ್ಯೆ ಸಂಚರಿಸುವ ಬಸ್ಸುಗಳ ಮೂಲಕ ಕುಂಭಾಶಿ ತಲುಪಬಹುದಾಗಿದೆ. ಕುಂದಾಪುರ ರೈಲ್ವೆ ನಿಲ್ದಾಣಕ್ಕೂ ಸನಿಹವಿದೆ.

ಕೃಪೆ: ಫೇಸ್ಬುಕ್.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!