ಮಳೆಯ ಕಾರಣ; ಪಂಚರತ್ನ ರಥಯಾತ್ರೆಯನ್ನು 4 ದಿನ ಮುಂದೂಡಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, (ಡಿ.10): ನಾಳೆಯಿಂದ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಬಂಗಾಳಕೊಲ್ಲಿಯಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ  ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾ ಎಂದು ಮಾಜಿ ಮುಖ್ಯಮಂತ್ರಿ ಅವರು ಮಾಹಿತಿ ನೀಡಿದ್ದಾರೆ.

ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು.

ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿರುವ ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈ ಕಾರಣಕ್ಕೆ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದ್ದು, ಡಿಸೆಂಬರ್ 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!