ಧರ್ಮಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಧಾರ್ಮಿಕ ತಾಣ. ಮಂಜುನಾಥಸ್ವಾಮಿ ದೇವಾಲಯವಿರುವ ಈ ಊರು ಬಹಳ ಪ್ರಸಿದ್ಧ.
ಸುಮಾರು ಏಳು ನೂರು ವರುಷಗಳ ಇತಿಹಾಸ ಇರುವ ಇದು ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ ಆರಾಧ್ಯ ದೈವ ಮಂಜುನಾಥ ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತಿಗಳಾದ ಶ್ರೀ ವಾದಿರಾಜರು ಪ್ರತಿಷ್ಠಾಪಿಸಿದರು ಎಂದು ಪ್ರತೀತಿ ಇದೆ.
ಈ ದೇವಾಲಯವು ದಾನ ಧರ್ಮಕ್ಕೆ ಪ್ರಸಿದ್ಧವಾಗಿ ಮತ್ತು ಭಕ್ತರಿಗೆ ನೈತಿಕ, ಸಾಂಸ್ಕೃತಿಕ, ಧಾರ್ಮಿಕ ಕೇಂದ್ರವಾಗಿ ಯಕ್ಷಗಾನದ ನಾಡಿನ ಚರಿತ್ರೆಯನ್ನೂ ಅಲಂಕರಿಸುತ್ತಿದೆ.
ಸಾಮೂಹಿಕ ವಿವಾಹ, ಅನ್ನದಾನ, ವಿದ್ಯಾದಾನ, ಔಷಧದಾನ ಸೇರಿದಂತೆ ಇನ್ನು ಅನೇಕ ಸಾಮಾಜಿಕ ಸೇವೆಗಳಲ್ಲಿ ವೀರೇಂದ್ರ ಹೆಗ್ಗಡೆಯವರ ತಮ್ಮನ್ನು ತೊಡಗಿಸಿಕೊಂಡು ಶ್ರೀ ಕ್ಷೇತ್ರವನ್ನು ಮುನ್ನಡೆಸುತ್ತಿದ್ದಾರೆ.
Pic: ಸಾಮಾಜಿಕ ಜಾಲತಾಣ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

