ದೊಡ್ಡಬಳ್ಳಾಪುರ, (ಡಿ.10): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವ ರಾಜ್ಯದ ಮೇಲೂ ಬೀರಿದೆ. ಹಾಗೆಯೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತವಾಗಿ ಕಳೆದ ಎರಡು ದಿನಗಳಿಂದ ಜಿನುಗು ಮಳೆ ಹಾಗೂ ಶೀತ ಗಾಳಿ ಹೆಚ್ಚಾಗಿದೆ. ಇಂದು ಸಹ ಸತತ ಮಳೆ, ಅತಿಯಾದ ಚಳಿಯಿಂದ ಜನತೆ ಪರದಾಡುವಂತಾಗಿದೆ.
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿ ಕರಾವಳಿ ಪ್ರದೇಶದತ್ತ ಸಾಗಿ ಬಂದ ‘ಮಾಂಡೌಸ್’ ಚಂಡಮಾರುತ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ ಎರಡು ದಿನ ರಾಜ್ಯದಲ್ಲಿ ಮಳೆ ಆರ್ಭಟಿಸಲಿದ್ದು, ಒಟ್ಟು 15ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೊಷಿಸಲಾಗಿತ್ತು.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಕರ್ನಾಟಕದ ಮೇಲೆ ಅದರಲ್ಲೂ ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇಲೆ ‘ಮಾಂಡೌಸ್’ ಪ್ರಭಾವ ಹೆಚ್ಚಾಗಿರಲಿದೆ ಎನ್ನಲಾಗಿದೆ.
ಒಟ್ಟು ಮುಂದಿನ ಮೂರು ದಿನಗಳ ಪೈಕಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಸಹಿತ ಧಾರಾಕಾರವಾಗಿ ಮಳೆ ಅಬ್ಬರಿಸಲಿದೆ. ಹೀಗಾಗಿ ಎರಡು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿ ಒಟ್ಟು 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
Pic: ಗುರುಶಂಕರಾಚಾರ್.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

