ದೊಡ್ಡಬಳ್ಳಾಪುರ, (ಡಿ.11): ತಾಲೂಕಿನ ಆರೂಢಿ ಗ್ರಾಮದ ಶ್ರೀ ಕೋಡಿ ಮಲ್ಲೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯಾಗಿದ್ದ ಎ.ಎನ್.ಕೃಷ್ಣಪ್ಪ (91ವರ್ಷ) ಅವರು ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣ ಚಿಕಿತ್ಸೆಗೆ ದಾಖಲಾಗಿದ್ದ ಕೃಷ್ಣಪ್ಪ ಅವರು, ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳ ತುಂಬು ಕುಟುಂಬವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸೋಮವಾರ ಆರೂಢಿ ಗ್ರಾಮದ ಸ್ವಂತ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

