ಎನ್ ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ವಿಶೇಷ ತರಬೇತಿ: ಸಿಎಂ ಬೊಮ್ಮಾಯಿ

ಬೆಂಗಳೂರು, (ಡಿ.11): ಎನ್ ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭ – 2022ರಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್  ಅವರೊಂದಿಗೆ  ಪಾಲ್ಗೊಂಡು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು

ತಳ ಹಂತ ಪೊಲೀಸರು ಹಾಗೂ ಐಪಿಎಸ್ ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ  ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ. ಇದಕ್ಕೆ ಪ್ರತ್ಯೇಕ ತರಬೇತಿ ಸಂಸ್ಥೆ, ಪಠ್ಯ ಹಾಗೂ ವಿವಿಧ ಕೋರ್ಸುಗಳ ಮೂಲಕ  ಅವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದರು.

ಪೊಲೀಸರು ಬಳಸುವ ತಂತ್ರಜ್ಞಾನ ಬಲಪಡಿಸುವ ವಿಶೇಷ ಕಾರ್ಯಕ್ರಮ: ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ನಿಯಂತ್ರಣ ಮಾಡುವುದು  ಪೊಲೀಸರ ಜವಾಬ್ದಾರಿಯಾಗಿದೆ. ತಂತ್ರಜ್ಞಾನ ದ ಮೂಲಕ ಅಪರಾಧಗಳು ಹೆಚ್ಚಾಗುತ್ತಿವೆ. ಅದೇ ತಂತ್ರಜ್ಞಾನ ದಲ್ಲಿ ಸಾಕ್ಷಿಗಳನ್ನು ಬಿಟ್ಟು ಹೋಗಿರುತ್ತಾರೆ. ಗೃಹ ಇಲಾಖೆ  ಪೊಲೀಸರು ಬಳಸುವ ತಂತ್ರಜ್ಞಾನ ವನ್ನು ಇನ್ನಷ್ಟು ಬಲಪಡಿಸುವ ಕಾರ್ಯಕ್ರಮವನ್ನು ಮಾಡಬೇಕು. ಅದಕ್ಕೆ ಬೇಕಾದ ಪರಿಣಿತರನ್ನು ಬಳಸಿಕೊಂಡು, ಬೇಕಾದ ಅನುದಾನ ಮುಂದಿನ ಬಜೆಟ್ ನಲ್ಲಿ ನೀಡಲಾಗುವುದು ಎಂದರು.

ರಾಜ್ಯದ ಪ್ರತಿ ಪ್ರದೇಶದಲ್ಲಿ ಎರಡು ಫಾರೆನ್ಸಿಕ್ ಲ್ಯಾಬ್: ಪೊಲೀಸ್ ವ್ಯವಸ್ಥೆಯನ್ನು ಬಹಳ ಆಧುನಿಕರಣ ಮಾಡಿದ್ಧೇವೆ. ಫಾರೆನ್ಸಿಕ್ ಲ್ಯಾಬ್ ಆಧುನಿಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫಾರೆನ್ಸಿಕ್ ಲ್ಯಾಬ್ ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿ ಯಲ್ಲಿ ಈ ಪ್ರಯೋಗಾಲಯಗಳನ್ನು ಮಾಡಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನಿಷ್ಟ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪಿಸಬೇಕು. ಶೀಘ್ರ ಅಪರಾಧ ಪತ್ತೆಗೆ ಈ ಕ್ರಮ ಆಗಲೇಬೇಕು ಎಂದರು.

ಪೊಲೀಸ್ ನೇಮಕಾತಿ ಅಪರಾಧ ತಡೆಯಲು ಕಠಿಣ ಕ್ರಮ: ಪೊಲೀಸ್ ನೇಮಕಾತಿಯಲ್ಲಿ ಆಗುತ್ತಿರುವ ಅಪರಾಧ ತಡೆಯಲು ಇನ್ನಷ್ಟು ಕನಿಷ್ಟ ಕ್ರಮ ಕೈಗೊಳ್ಳಲೇಬೇಕು. ಪೊಲಿಸ್ ನೇಮಕಾತಿಯಲ್ಲಿಯೇ ಅಕ್ರಮ ನಡೆದರೆ ಬೇರೆ ಅಪರಾಧ ತಡೆಯುವುದು ಸಾಧ್ಯವಿದೆಯೇ?. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಹರಿಸಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್: ಪೊಲೀಸ್ ಸೇವೆ ವಿಶಿಷ್ಟ ಸೇವೆಯಾಗಿದ್ದು, ಅವರು ತಮ್ಮ ಬದುಕಿನಲ್ಲಿ ಬಹಳ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹತ್ತು ಹಲವಾರು ಒತ್ತಡಗಳ ನಡುವೆ ಕೆಲಸ ಮಾಡಬೇಕಾಗುತ್ತದೆ. ಎಲ್ಲ ಒತ್ತಡಗಳ ನಡುವೆ ಕರ್ನಾಟಕ ಪೊಲಿಸ್ ಉತ್ತಮ ಕೆಲಸ ಮಾಡುತ್ತಿದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್ ಆಗಿದ್ದು, ಶ್ರೇಷ್ಠ ಸೇವೆಯನ್ನು ಸಲ್ಲಿಸುತ್ತಿದೆ ಎಂಬ ಹೆಮ್ಮೆ ಇದೆ. ಪೊಲೀಸರಿಗೆ ಕಾನೂನು ತಂದೆ ಇದ್ದಂತೆ, ಕರ್ತವ್ಯ ತಾಯಿ ಇದ್ದಂತೆ. ಕರ್ನಾಟಕ ಪೊಲೀಸರು ಯಾವುದೇ ಹೊಸ ತಂತ್ರಜ್ಞಾನದಿಂದ  ಹೊರಗುಳಿಯಬಾರು. ಈ ನಿಟ್ಟಿನಲ್ಲಿ  ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಸುದೀರ್ಘ ಸೇವೆಯಲ್ಲಿ ರಾಷ್ಟ್ರಪತಿಗಳನ್ನು ನಿಮ್ಮನ್ನು ಗುರುತಿಸುವುದು ರಾಜ್ಯಕ್ಕೆ ಹೆಮ್ಮೆಯ ವಿಷಯ. ತಾವು ಉತ್ತಮ ಕೆಲಸ  ಮಾಡಿದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುರುತಿಸುತ್ತವೆ‌. ಪ್ರಶಸ್ತಿ ಪಡೆದವರೆಲ್ಲರೂ ಈ ಪದಕಗಳಿಗೆ ಅರ್ಹರಾಗಿದ್ದು, ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಮಾರಂಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ,  ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಪ್ರವೀಣ್ ಸೂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]