ದೊಡ್ಡಬಳ್ಳಾಪುರ, (ಡಿ.12): ನಾಡಪ್ರಭು ಕೆಂಪೇಗೌಡ 513 ನೇ ಜಯಂತಿ ಅಂಗವಾಗಿ ತಾಲೂಕಿನ ಆರೂಢಿ ಗ್ರಾಮದಲ್ಲಿನ ಶ್ರೀ ಅರವಿಂದ ಪ್ರೌಢಶಾಲೆಗೆ ಉಚಿತವಾಗಿ ನಿರ್ಮಿಸಿಕೊಟ್ಟಿರುವ ನೂತನ ಶಾಲಾ ಕಟ್ಟಡ ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ॥ನಿರ್ಮಲಾನಂದನಾಥ ಸ್ವಾಮೀಜಿ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿ ಗ್ರಾಮವಾದ ಆರೂಢಿ ವ್ಯಾಪ್ತಿಯಿಂದ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿರುವುದನ್ನು ಮುಖಂಡರು ಗಮನಕ್ಕೆ ತಂದಿದ್ದು, ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳನಾಥ ಸ್ವಾಮೀಜಿಗಳು ಈ ವ್ಯಾಪ್ತಿಯ ಶಾಸಕರು, ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿ, ಈ ವ್ಯಾಪ್ತಿಯಲ್ಲಿ ಕಾಲೇಜು ಸ್ಥಾಪನೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮೇಲಣಗವಿ ಮಠದ ವಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಟಿ.ವೆಂಕಟರಮಣಯ್ಯ, ಐಎಎಸ್ ಅಧಿಕಾರಿ ಸಿ.ಎಸ್. ಕರೀಗೌಡ, ಜಿಪಂ ಮಾಜಿ ಸದಸ್ಯೆ ಕಲ್ಪನ ಟಿ.ಆನಂದ್, ಶ್ರೀ ಮಂಗಳನಾಥ ಸ್ವಾಮೀಜಿ, ಕೆಪಿಸಿಸಿ ಸದಸ್ಯ ಆರ್.ಜಿ. ವೆಂಕಟಾಚಲಯ್ಯ, ಜಿಪಂ ಮಾಜಿ ಸದಸ್ಯ ಅಪ್ಪಯ್ಯಣ್ಣ, ಮುಖಂಡರಾದ ಟಿ.ವಿ.ಲಕ್ಷ್ಮೀನಾರಾಯಣ್, ಧೀರಜ್ ಮುನಿರಾಜು, ಕುಂಟನಹಳ್ಳಿ ಮಂಜುನಾಥ್, ಪುಟ್ಟಬಸವರಾಜು ಸೇರಿದಂತೆ ಅನೇಕ ಮುಖಂಡರು ಇದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
