ದೊಡ್ಡಬಳ್ಳಾಪುರ, (ಡಿ.12): ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯನ್ನು ರದ್ದು ಮಾಡಲಾಗಿದೆ. ಆದರೆ ಕಿಡಿಗೇಡಿಗಳು ರದ್ದು ಮಾಡಿದೆ ಎನ್ನಲಾದ ಕರ ಪತ್ರವನ್ನು ತಿರುಚಿ ನಕಲಿ ಪತ್ರವನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದ್ದಾರೆ.

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ಧವಾಗಿದ್ದು, ನೆರೆಯ ತಮಿಳುನಾಡು ಮತ್ತು ಆಂಧ್ರಪ್ರದೇಶದ ರೈತರು ಸಹ ಜಾತ್ರೆಗೆ ಬಂದು ದನಗಳ ವ್ಯಾಪಾರ ಮಾಡುತ್ತಾರೆ. ಆದರೆ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ, ಘಾಟಿ ದನಗಳ ಜಾತ್ರೆಯನ್ನು ರದ್ದು ಮಾಡಲಾಗಿದೆ.

ಆದರೆ ಕಿಡಿಗೇಡಿಗಳು ರಾಸುಗಳ ಜಾತ್ರೆ ರದ್ದು ಮಾಡಿದೆ ಎಂದು ಮುದ್ರಿಸಿರುವ ಕರಪತ್ರವನ್ನು ತಿರುಚಿ, ಡಿ.15ರಿಂದ 22ರ ವರೆಗೆ ಜಾತ್ರೆ ನಡೆಯಲಿದೆ ಎಂದು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೈರಲ್ ಆಗಿದೆ.
ಈ ಕುರಿತಂತೆ ಅಪರ ಜಿಲ್ಲಾಧಿಕಾರಿ ವಿಜಯ ಇ.ರವಿಕುಮಾರ ಅವರು ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ, ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘಾಟಿ ದನಗಳ ಜಾತ್ರೆಯನ್ನು ರದ್ದು ಮಾಡಲಾಗಿದೆ. ಇದರಲ್ಲಿ ಪ್ರಸ್ತುತ ಯಾವುದೇ ಬದಲಾವಣೆ ಇಲ್ಲವಾಗಿದ್ದು, ಸುಳ್ಳು ಮಾಹಿತಿಯುಳ್ಳ ನಕಲಿ ಕರಪತ್ರವನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಡಬಾರದೆಂದು ಮನವಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
