ಬೆಂ.ಗ್ರಾ.ಜಿಲ್ಲೆ, (ಡಿ.12): ಪೊಲೀಸ್ ಅಧೀಕ್ಷಕರ ಕಛೇರಿ, ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಕುರಿತು ಅರ್ಜಿ ಸ್ವೀಕರಿಸುವ ನೆಲಮಂಗಲ ತಾಲ್ಲೂಕು ಮಟ್ಟದ ಸಭೆಯನ್ನು ಡಿಸೆಂಬರ್ 14 ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ನೆಲಮಂಗಲ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.

ಸಾರ್ವಜನಿಕರು ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ, ಸರ್ಕಾರಿ ಕಛೇರಿಗಳಲ್ಲಿ ವಿಳಂಬ/ನಿರ್ಲಕ್ಷ್ಯ ಅಥವಾ ದುರುಪಯೋಗ/ದುರಾಡಳಿತ ಮಾಡುತ್ತಿದ್ದಲ್ಲಿ ಅಂತಹ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಲಿಖಿತ ಅಹವಾಲುಗಳನ್ನು ದ್ವಿಪ್ರತಿಯಲ್ಲಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಜೋಶಿ ಶ್ರೀನಾಥ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
