ಬೆಂಗಳೂರು, (ಡಿ.12): ಕಳೆದ ಮೂರು ದಿನಗಳಿಂದ ಮಾಂಡೌಸ್ ಚಂಡಮಾರುತದ ಪರಿಣಾಮ ತೀವ್ರವಾಗಿದ್ದ ಚಳಿ ಶೀತಗಾಳಿ, ಸೋಮವಾರ ಬೆಳಗ್ಗೆ ಅಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಇಂದು 25° C ವರೆಗೂ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ.

ಮಾಂಡೌಸ್ ಚಂಡಮಾರುತದ ಪರಿಣಾಮ ತಾಪಮಾನ 17°C ವರೆಗೂ ಕುಸಿದು ಪರದಾಡುವಂತಾಗಿತ್ತು. ಆದರೆ ಸೋಮವಾರ ಬೆಳಗ್ಗೆ 8 ಗಂಟೆಯ ವರದಿಯಂತೆ 20°C ಇದ್ದು ಸಂಜೆಯ ವೇಳೆಗೆ 25°C ವರೆಗೂ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಡಿಸೆಂಬರ್ 15ರವರೆಗೂ ಮೋಡ ಕವಿದ ವಾತಾವರಣ, ತುಂತುರು ಮಳೆ ಮತ್ತು ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಹೈ ಅಲರ್ಟ್ ನೀಡಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 14 ರವರೆಗೂ ಮಳೆ ಜೊತೆಗೆ ಮೋಡಕವಿದ ವಾತಾವರಣ ಇರಲಿದೆ ಎಂದು ಎಚ್ಚರಿಸಿದೆ.
ತೀವ್ರ ಚಳಿಯಿಂದ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಜೆ ಘೋಷಣೆಯಾಗಬಹುದೆಂದು ಅನೇಕರು ನಿರೀಕ್ಷಿಸಿದ್ದರು. ಆದರೆ ಭಾನುವಾರದಿಂದ ಮಳೆ ಕಡಿಮೆಯಾಗಿ, ಉಷ್ಣಾಂಶ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಜೆ ಘೋಷಿಸಲು ಜಿಲ್ಲಾಡಳಿತ ಹಿಂದೇಟು ಹಾಕಿದೆ ಎನ್ನಲಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
