
ಬೆಂಗಳೂರು, (ಡಿ.13): ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಉತ್ತೀರ್ಣ ಮಾಡಲಾಗುತ್ತಿತ್ತು. ಹೀಗೆ ಮಾಡುವುದರಿಂದ ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತಿದ್ದು, ಜೊತೆಗೆ ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್.ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರಿಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
