ದೊಡ್ಡಬಳ್ಳಾಪುರ, (ಡಿ,14): ಹಾವೇರಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಕನ್ನಡ ಜ್ಯೋತಿಯನ್ನು ಹೊತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ಕನ್ನಡ ರಥ ಗುಂಜೂರಿಗೆ ಆಗಮಿಸಿದ್ದು, ದೊಡ್ಡಬಳ್ಳಾಪುರ ತಾಲೂಕಿಗೆ ಶಾಲಾ ಮಕ್ಕಳು ಹಾಗೂ ಮಹಿಳೆಯರು ಪೂರ್ಣಕುಂಬ ಸ್ವಾಗತ ಕೋರಿದರು..
ಕಸಾಪ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡದ ಸ್ವಾಭಿಮಾಣದ ಸಂಕೇತವಾದ ಕನ್ನಡ ರಥದ ಜಾಥಾ ಹಮ್ಮಿಕೊಳ್ಳಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿ ಚಾಲನೆಗೊಂಡಿದೆ. ಸಮ್ಮೇಳನಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಥ ಸಂಚರಿಸಲಿದ್ದು, ಇಂದು ಗುಂಜೂರಿನ ಮೂಲಕ ದೊಡ್ಡಬಳ್ಳಾಪುರ ತಾಲೂಕಿಗೆ ಆಗಮಿಸಲಿದೆ.
ಜಿಲ್ಲಾಡಳಿತದ ಸಹಯೋಗದಲ್ಲಿ ಕಾರ್ಯಕಮ ಯೋಜಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸ್ಥಳೀಯ ತಾಲೂಕು ಆಡಳಿತದ ಸಹಯೋಗದಲ್ಲಿ ಜಾಥಾ ನಡೆಯಲಿದೆ.
ಗೌರಿಬಿದನೂರು ತಾಲೂಕಿನಿಂದ ತಾಲೂಕಿನ ಗಡಿ ಭಾಗವಾದ ಗುಂಜೂರು ಬಳಿ ಸ್ವಾಗತ ಕೋರಲಾಗಿದ್ದು, ರಥವನ್ನು ಅದ್ಧೂರಿ ಸ್ವಾಗತದೊಂದಿಗೆ ತಾಲೂಕಿಗೆ ಕರೆತರಲಾಗುತ್ತಿದೆ. ಕಂಟನಕುಂಟೆ ಬಳಿ ಪೂಜಾ ಕಾರ್ಯಕ್ರಮ, ಬಳಿಕ ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರ ವೃತ್ತದಲ್ಲಿ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ರಥವನ್ನು ಸ್ವಾಗತಿಸಲು ಸಿದ್ಧತೆ ನಡೆಸಲಾಗಿದೆ.
ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದ್ದು, ಸಂಜೆ ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

