ನಮ್ಮ ಕ್ಲಿನಿಕ್’ಗೆ ಚಾಲನೆ: ದೊಡ್ಡಬಳ್ಳಾಪುರದಲ್ಲಿ ಒಂದೂವರೆ ಕೋಟಿ ರೂ ಅನುದಾನದಲ್ಲಿ ಹೊರ ರೋಗಿಗಳ ವಿಭಾಗ ನಿರ್ಮಾಣ – ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ, (ಡಿ,14): ನಗರದಲ್ಲಿರುವ ತಾಯಿ ಮಗು ಆಸ್ಪತ್ರೆ ಬಳಿ ಎಜಾಕ್ಸ್ ಕಂಪನಿಯ ಸಿ.ಎಸ್.ಆರ್ ಅನುದಾನ ಸುಮಾರು ಒಂದೂವರೆ ಕೋಟಿ ರೂ ವೆಚ್ಚದಲ್ಲಿ ಹೊರ ರೋಗಿಗಳ ವಿಭಾಗವನ್ನು ನಿರ್ಮಿಸಲಾಗುತ್ತಿದೆ. ನಮ್ಮ ಕ್ಲಿನಿಕ್‍ಗಳ ಆರಂಭದಿಂದಾಗಿ ತಾಯಿ ಮತ್ತು ಮಗು ಆಸ್ಪತ್ರೆ ಮೇಲಿನ ಹೊರೆ ತಗ್ಗಲಿದ್ದು, ನಗರಪ್ರದೇಶದ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ನಗರಸಭೆಯ ಹಳೆಯ ಕಟ್ಟಡ, ವಿದ್ಯಾನಗರದ ಶಾಲೆಯ ಆವರಣ ಹಾಗೂ ಬಾಶೆಟ್ಟಿಹಳ್ಳಿಯ ಹಳೆಯ ಸರ್ಕಾರಿ ಶಾಲೆ ಅವರಣದಲ್ಲಿ ಸ್ಥಾಪಿಸಿರುವ ನಮ್ಮ ಕ್ಲಿನಿಕ್‍ಗಳನ್ನು ಉದ್ಘಾಟಿಸಿ ಮಾತನಾಡಿದರು.

ನಗರದ ತಾಯಿ ಮತ್ತು ಮಗು ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ 800 ಕ್ಕೂ ಹೆಚ್ಚು ಹೊರರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಇದರಿಂದ ಆಸ್ಪತ್ರೆಯಲ್ಲಿ ಒತ್ತಡ ಹೆಚ್ಚಾಗಲಿದ್ದು, ನಮ್ಮ ಕ್ಲಿನಿಕ್‍ಗಳ ಆರಂಭ ಸೂಕ್ತವಾಗಿದೆ ಎಂದರು. ರಾಜ್ಯದ ಜನರ ಆರೋಗ್ಯವನ್ನು ಕಾಪಾಡಲು ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೇರೆ ತಾಲೂಕಿನ ಪಾಲಾಗುತ್ತಿದ್ದ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರಕ್ಕೆ ಮಂಜೂರು ಮಾಡಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಅನುಕೂಲಕ್ಕೆ ಕೈಗಾರಿಕೆಗಳ ಸಿ.ಎಸ್.ಆರ್ ಅನುದಾನದ ಮೂರುವರೆ ಕೋಟಿ ರೂ ವೆಚ್ಚದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಿಸಲಾಗಿದೆ.  ಜಿಲ್ಲಾ ಆಸ್ಪತ್ರೆಗೆ ತ್ವರಿತವಾಗಿ ನಿರ್ಮಿಸಲು ಸರ್ಕಾರದ ಮೇಲೆ ನಾನು ಸಹ ಒತ್ತಡವನ್ನು ಹಾಕುತ್ತಿದ್ದು, ತಾವು ಸಹ ಸರ್ಕಾರಕ್ಕೆ ಮನವಿ ಸಲ್ಲಿಸಿದರೆ ತಾಲೂಕಿನ ಜನತೆಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ನಮ್ಮ ಕ್ಲಿನಿಕ್ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಹೆಚ್ಚಲಿದ್ದು, ಜನತೆ ಆರೋಗ್ಯ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಮಾತನಾಡಿ, ನಮ್ಮ ಕ್ಲಿನಿಕ್‍ಗಳಲ್ಲಿ ದೈಹಿಕ ತಪಾಸಣೆ, ರಕ್ತ ಪರೀಕ್ಷೆ, ರಕ್ತದೊತ್ತಡ, ಮಧುಮೇಹ, ಪರೀಕ್ಷೆಗಳು ಸೇರಿ ಎಲ್ಲವೂ ಉಚಿತ. ಔಷಧಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಬೇಕಿದ್ದರೆ, ಮೇಲಿನ ಹಂತದ ಚಿಕಿತ್ಸೆಗೆ ಇಲ್ಲಿನ ವೈದ್ಯರೇ ಶಿಫಾರಸು ಮಾಡಿ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ,  ಸಮಗ್ರ ಆರೋಗ್ಯ ಸೇವೆಗಳು ಸಾರ್ವತ್ರಿಕ ಲಸಿಕಾಕರಣ, ಕುಟುಂಬ ಕಲ್ಯಾಣ ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೈಕೆ ಕೇಂದ್ರಗಳು, ತುರ್ತು ವೈದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ, ಉಚಿತ ಪ್ರಯೋಗಶಾಲಾ ಸೇವೆಗಳು ಮೂತ್ರ ಪರೀಕ್ಷೆ, ಕ್ಷಯ ಪರೀಕ್ಷೆ, ಡೆಂಗಿ, ಮಲೇರಿಯಾದಂತಹ 12 ರೀತಿಯ ಸೇವೆಯನ್ನು ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯೇಂದ್ರ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ಫರ್ಹಾನಾ ತಾಜ್, ಪೌರಾಯುಕ್ತ ಕೆ.ಜೆ.ಶಿವಶಂಕರ್, ಡಾ.ಸೀಮಾ, ಡಾ.ಧರ್ಮೇಂದ್ರ, ನಗರಸಭಾ ಸದಸ್ಯರಾದ ರಜನಿ, ಎಸ್.ನಾಗಮಣಿ, ಶಿವಶಂಕರ್, ತ.ನ.ಪ್ರಭುದೇವ್, ಶಿವಕುಮಾರ್ ಸೇರಿದಂತೆ ನಗರಸಭೆ ಸದಸ್ಯರು, ಸ್ಥಳೀಯ ಮುಖಂಡರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!